ಬ್ಲಡ್ ಡೋನರ್ಸ್ ಮಂಗಳೂರು, ಸ್ಮೈಲ್ ಫೌಂಡೇಶನ್ ಕುಳಾಯಿ ತಂಡದಿಂದ ಮೀಲಾದುನ್ನಬಿ ಕಾರ್ಯಕ್ರಮ

ಮಂಗಳೂರು, ನ. 22: ಸ್ಮೈಲ್ ಫೌಂಡೇಶನ್ ಕುಳಾಯಿ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ಮೀಲಾದುನ್ನಬಿ ಪ್ರಯುಕ್ತ ತೇಜಸ್ವಿನಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ತೇಜಸ್ವಿನಿ ಆಸ್ಪತ್ರೆಯ ಡಾ. ಅಜಿತ್ ಕುಮಾರ್ ರಕ್ತದಾನ ಶಿಬಿರ ಉದ್ಘಾಟನೆ ಮಾಡಿ ನಂತರ ರಕ್ತದಾನದ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಹಮೀದ್ ಅದಿರ್, ಸ್ಮೈಲ್ ಫೌಂಡೇಶನ್ ನಾಯಕ ತೌಫೀಕ್ ಕುಳಾಯಿ, ಫಾರೂಕ್, ಸಿದ್ದೀಕ್ ಮಂಜೇಶ್ವರ ಹಾಗೂ ಸದಸ್ಯರು ಭಾಗವಹಿಸಿದ್ದರು.
Next Story