ಮಂಡ್ಯ: ಚೂರಿಯಿಂದ ಇರಿದು ಅಣ್ಣನನ್ನೇ ಕೊಲೆಗೈದ ತಮ್ಮ
ಅನೈತಿಕ ಸಂಬಂಧ ಆರೋಪ

ಮಂಡ್ಯ, ನ.22: ಅನೈತಿಕ ಸಂಬಂಧದ ಹಿನ್ನೆಲೆ ತಮ್ಮನೇ ಅಣ್ಣನನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕೆಸ್ತೂರು ಗ್ರಾಮದ ಬಿಎಂಟಿಸಿ ಬಸ್ ನಿರ್ವಾಹಕ ಶಶಿಕುಮಾರ್ (45) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ತಮ್ಮ ಅರಣ್ಯ ಇಲಾಖೆ ನೌಕರ ರವಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಬುಧವಾರ ತಡರಾತ್ರಿ ಅಣ್ಣ ತಮ್ಮ ಜತೆಯಲ್ಲೇ ಮದ್ಯಪಾನ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು, ರವಿ ಶಶಿಕುಮಾರ್ ಅವರನ್ನು ಚಾಕುವಿನಿಂದ ಇರಿದು ಕೊಂದು ಪೊಲೀಸರಿಗೆ ಶರಣಾದ ಎನ್ನಲಾಗಿದೆ.
ತನ್ನ ಹೆಂಡತಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಈ ಕೊಲೆಗೈದಿರುವುದಾಗಿ ರವಿ ಆರೋಪಿಸಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ರವಿಯನ್ನು ಕೆಸ್ತೂರು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Next Story





