Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಬ್ಬು ಬೆಳೆಯುವ ರೈತರ ಹಿತ ಕಾಪಾಡುವುದು...

ಕಬ್ಬು ಬೆಳೆಯುವ ರೈತರ ಹಿತ ಕಾಪಾಡುವುದು ರಾಜ್ಯ ಸರಕಾರದ ಕರ್ತವ್ಯ: ಕುಮಾರಸ್ವಾಮಿ

ಸಮಸ್ಯೆ ಬಗೆಹರಿಸಲು ಸಕ್ಕರೆ ಕಾರ್ಖಾನೆಗಳ ಮಾಲಕರಿಗೆ ಮುಖ್ಯಮಂತ್ರಿ ತಾಕೀತು

ವಾರ್ತಾಭಾರತಿವಾರ್ತಾಭಾರತಿ22 Nov 2018 7:58 PM IST
share
ಕಬ್ಬು ಬೆಳೆಯುವ ರೈತರ ಹಿತ ಕಾಪಾಡುವುದು ರಾಜ್ಯ ಸರಕಾರದ ಕರ್ತವ್ಯ: ಕುಮಾರಸ್ವಾಮಿ

ಬೆಂಗಳೂರು, ನ. 22: ‘ಯಾವುದೇ ಗೊಂದಲಕ್ಕೆ ಎಡೆ ಮಾಡದಂತೆ ರೈತರೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಬಗೆಹರಿಸಬೇಕು. ಈಗಾಗಲೇ ಕಟಾವಿಗೆ ಸಿದ್ದವಿರುವ ಕಬ್ಬನ್ನು ಅರೆಯಲು ರೈತರೊಂದಿಗೆ ಕ್ರಮಬದ್ಧ ಒಪ್ಪಂದ ಮಾಡಿಕೊಳ್ಳಬೇಕು’ ಎಂದು ಸಿಎಂ ಕುಮಾರಸ್ವಾಮಿ, ಸಕ್ಕರೆ ಕಾರ್ಖಾನೆಗಳ ಮಾಲಕರಿಗೆ ನಿರ್ದೇಶನ ನೀಡಿದ್ದಾರೆ. 

ಗುರುವಾರ ಸಿಎಂ ಗೃಹ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲಕರೊಂದಿಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಯುವ ರೈತರ ಹಿತ ಕಾಪಾಡುವುದು ರಾಜ್ಯ ಸರಕಾರದ ಕರ್ತವ್ಯ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಪ್ರಸಕ್ತ ಹಂಗಾಮಿನಲ್ಲಿ ಯಾವುದೇ ಗೊಂದಲವಾಗದಂತೆ ಎಚ್ಚರ ವಹಿಸಲು ಸಕ್ಕರೆ ಕಾರ್ಖಾನೆಗಳ ಮಾಲಕರಿಗೆ ಸೂಚಿಸಿದ ಕುಮಾರಸ್ವಾಮಿ, ಎಲ್ಲ ಸಕ್ಕರೆ ಕಾರ್ಖಾನೆ ಮಾಲಕರು ಕಡ್ಡಾಯವಾಗಿ ಎಫ್‌ಆರ್‌ಪಿ ದರ ಪಾವತಿಸಬೇಕು. ಇದಕ್ಕೆ ಸರಕಾರದ ಮಾರ್ಗಸೂಚಿಗಳಂತೆ ಪ್ರತಿ ರೈತನೊಂದಿಗೆ ಕಡ್ಡಾಯವಾಗಿ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಅನಂತರ ಕಬ್ಬು ನಿಯಂತ್ರಣ ಮಂಡಳಿಯ ನಿರ್ಣಯಗಳಂತೆ ಆದಾಯ ಹಂಚಿಕೆ ಸೂತ್ರ ಜಾರಿಗೊಳಿಸಬೇಕು. ಅಲ್ಲದೆ ರೈತರಿಗೆ ತೂಕ ಹಾಗೂ ಇಳುವರಿ ಪ್ರಮಾಣ ನಿಗದಿಯಲ್ಲಿ ಪಾರದರ್ಶಕತೆ ತರಲು ಸರಕಾರ ಹೊರಡಿಸುವ ಸುತ್ತೋಲೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಸ್ಥಿರತೆ ನಿಧಿ ಸ್ಥಾಪಿಸಲು ಮನವಿ: ದೇಶದಲ್ಲಿ ಪ್ರಸ್ತುತ 230ಲಕ್ಷ ಟನ್ ಸಕ್ಕರೆ ದಾಸ್ತಾನಿದೆ. ಹೆಚ್ಚುವರಿ ಉತ್ಪಾದನೆ ಸಮಸ್ಯೆಯನ್ನು ಸರಿಪಡಿಸಲು ಕೇಂದ್ರ ಸರಕಾರ ಕಬ್ಬಿನಿಂದ ಇಥೆನಾಲ್ ಉತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದೆ. ಅಲ್ಲದೆ, ಎಫ್‌ಆರ್‌ಪಿ ಪಾವತಿ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳು ನಷ್ಟ ಅನುಭವಿಸಿದ ಸಂದರ್ಭದಲ್ಲಿ ನೆರವಾಗಲು ಸಕ್ಕರೆ ಸ್ಥಿರತೆಯ ನಿಧಿ ಸ್ಥಾಪಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸಕ್ಕರೆ ಕಾರ್ಖಾನೆ ಮಾಲಕರು ತಿಳಿಸಿದರು.

ಸಕ್ಕರೆ ಕಾರ್ಖಾನೆ ಮಾಲಕರು ರೈತರೊಂದಿಗೆ ವಿಶ್ವಾಸದ ಮೇಲೆ ಮಾಡಿಕೊಂಡಿರುವ ಒಪ್ಪಂದ. ಆದುದರಿಂದ ಈ ಮೊತ್ತ ಪಾವತಿಸುವುದು ನಿಮ್ಮ ಬದ್ಧತೆ. ಕಾರ್ಖಾನೆ ಮಾಲಕರು ವ್ಯವಹಾರದಲ್ಲಿ ಆಗುವ ಏರುಪೇರುಗಳನ್ನು ಸರಿಪಡಿಸಿಕೊಳ್ಳುವ ಸಾಮರ್ಥ್ಯವಿರುತ್ತದೆ. ಆದರೆ, ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದಿದ್ದರೆ ಸುಧಾರಿಸಿಕೊಳ್ಳಲು ಸಾಧ್ಯವಿಲ್ಲ. ರೈತರ ಹಿತರಕ್ಷಣೆ ಸರಕಾರದ ಕರ್ತವ್ಯವಾಗಿರುವುದರಿಂದ ರೈತರಿಗೆ ಒಪ್ಪಿಗೆ ಸೂಚಿಸಿದಂತೆ ಸೂಕ್ತ ದರ ನೀಡುವಂತೆ ಸಿಎಂ ಕುಮಾರಸ್ವಾಮಿ ಇದೇ ವೇಳೆ ಕಾರ್ಖಾನೆ ಮಾಲಕರಿಗೆ ಸೂಚಿಸಿದರು.

2017-18ನೆ ಸಾಲಿನಲ್ಲಿ ಸಕ್ಕರೆ ದರ ಏಕಾಏಕಿ ಕುಸಿದಿದ್ದರಿಂದ ಹಾಗೂ ಇನ್ನಿತರ ಕಾರಣದಿಂದ ಸಮಸ್ಯೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ 2,900 ರೂ.ಸಾರಿಗೆ ಮತ್ತು ಕಟಾವು ವೆಚ್ಚ 650ರೂ. ಕಡಿತಗೊಳಿಸಿ, ಪ್ರತಿ ಟನ್‌ಗೆ 2,250 ರೂ.ದರದಲ್ಲಿ ರೈತರಿಗೆ ನೀಡಲು ಒಪ್ಪಿಕೊಂಡಿದ್ದೇವೆ ಎಂದು ಕಾರ್ಖಾನೆ ಮಾಲಕರು ತಿಳಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಕಾರ್ಖಾನೆಗಳು ಎಫ್‌ಆರ್‌ಪಿ ದರಕ್ಕಿಂತ ಹೆಚ್ಚುವರಿ ಹಣವನ್ನು ನೀಡಿವೆ. ಉಳಿದ 9 ಸಕ್ಕರೆ ಕಾರ್ಖಾನೆಗಳ ಮಾಲಕರು ಸಮ್ಮತಿಸಿದ ಮೊತ್ತ ನೀಡದಿದ್ದರೂ, ಎಫ್‌ಆರ್‌ಪಿ ದರಕ್ಕಿಂತ ಹೆಚ್ಚಿಗೆ ದರ ಪಾವತಿಸಿದ್ದೇವೆ ಎಂದು ಮಾಲಕರು ತಿಳಿಸಿದರು. ಆ ಹಿನ್ನೆಲೆಯಲ್ಲಿ ರೈತರೊಂದಿಗೆ ಚರ್ಚಿಸಿ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳುವಂತೆ ಸಿಎಂ ಸೂಚಿಸಿದರು.

ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಎಸ್.ಆರ್.ಪಾಟೀಲ, ಸತೀಶ್ ಜಾರಕಿಹೊಳಿ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಸೇರಿ 31ಸಕ್ಕರೆ ಕಾರ್ಖಾನೆಗಳ ಮಾಲಕರು ಪಾಲ್ಗೊಂಡಿದ್ದರು.

‘ಪ್ರತಿಟನ್ ಕಬ್ಬಿಗೆ ಎಫ್‌ಆರ್‌ಪಿ ದರದ ಮೇಲೆ ಸರಕಾರ-150 ರೂ. ಹಾಗೂ ಸಕ್ಕರೆ ಕಾರ್ಖಾನೆ ಮಾಲಕರು-150 ರೂ. ಸೇರಿದಂತೆ ಒಟ್ಟು 300ರೂ. ಎಕ್ಸ್ ಫೀಲ್ಡ್‌ಗೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದ ಒಳಗೆ ಸಮಸ್ಯೆ ಬಗೆಹರಿಸಬೇಕೆಂದು ರಾಜ್ಯ ಸರಕಾರ ಗಡುವು ನೀಡಿದೆ’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X