ಮರಳು ದಿಬ್ಬ ತೆರವು: ತಾತ್ಕಾಲಿಕ ಪಟ್ಟಿ ಪ್ರಕಟ
ಉಡುಪಿ, ನ. 22: 2018-19ನೇ ಸಾಲಿನ ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯಲ್ಲಿ ಗುರುತಿಸಿ, ಅನುಮೋದನೆಗೊಂಡಿರುವ 5 ಮರಳು ದಿಬ್ಬಗಳಲ್ಲಿ ಮರಳನ್ನು ತೆರವುಗೊಳಿಸಲು ಅರ್ಹರಾಗಿರುವವರ ತಾತ್ಕಾಲಿಕ ಪಟ್ಟಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಅವರ ಕಚೇರಿ ನಾಮಫಲಕ ದಲ್ಲಿ ಪ್ರಕಟಿಸಲಾಗಿದೆ.
ಪಟ್ಟಿಯಲ್ಲಿರುವವರು ನ.23ರ ಸಂಜೆ 5 ಗಂಟೆಯೊಳಗೆ ಅಫಿದಾವಿತ್ ನೊಂದಿಗೆ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಲ್ಲಿಸುವಂತೆ ಇಲಾಖೆಯ ಹಿರಿಯ ಭೂವಿಜ್ಞಾನಿ/ ಅನುಷ್ಠಾನಾಧಿಕಾರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story