ಕೋಟೇಶ್ವರ: ನ.23ರಿಂದ ಮದ್ಯ ಮಾರಾಟ ನಿಷೇಧ
ಉಡುಪಿ, ನ. 22: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೇಶ್ವರ ಶ್ರೀಕೋಟಿಲಿಂಗೇಶ್ಚರ ದೇವಸ್ಥಾನದಲ್ಲಿ ಕೋಡಿ ಹಬ್ಬದ ಪ್ರಯುಕ್ತ ವಿವಿಧ ಕಾರ್ಯ ಕ್ರಮಗಳು ನಡೆಯಲಿರುವುದರಿಂದ, ಈ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕೋಟೇಶ್ವರ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಎಲ್ಲಾ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯ ಮಾರಾಟವನ್ನು ನ. 23ರ ಬೆಳಗ್ಗೆ 6 ರಿಂದ ನ.25ರ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಲು ಆದೇಶಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
Next Story