ಬೀದಿಬದಿ ಮಹಿಳಾ ವ್ಯಾಪಾರಸ್ಥರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಮಂಗಳೂರು, ನ. 22: ಪ್ರಸಕ್ತ ಸಾಲಿನ ಸಮೃದ್ಧಿ ಯೋಜನೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ 18 ರಿಂದ 60 ವಯೋಮಿತಿಯ ಬೀದಿಬದಿ ಮಹಿಳಾ ವ್ಯಾಪಾರಿಗಳಿಗೆ ಪ್ರೋತ್ಸಾಹ ಧನ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫಲಾನುಭವಿಗಗಳಿಗೆ ತಲಾ 10 ಸಾವಿರ ರೂ.ಯಂತೆ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರೋತ್ಸಾಹ ನೀಡಲಾಗುತ್ತದೆ. ಯೋಜನೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಮಹಿಳೆಯರು ಕಡ್ಡಾಯವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ‘ಬೀದಿಬದಿ ವ್ಯಾಪಾರಿ’ ಎಂದು ಗುರುತಿಸಿದ ದೃಢೀಕರಣ, ಗುರುತಿನ ಚೀಟಿ, ಬಿಪಿಎಲ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕಡ್ಡಾಯವಾಗಿ ಖಾತೆ ಹೊಂದಿರಬೇಕು.
ಬೀದಿಬದಿ ವ್ಯಾಪಾರ ಮಾಡುತ್ತಿರುವ ಸ್ಥಳದ ಭಾವಚಿತ್ರಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಂಗಳೂರು ಗ್ರಾಮಾಂತರ ವಾಮಂಜೂರು, ಮೂಡುಶೆಡ್ಡೆ- 575028, ದೂ.ಸಂ.: 0824-2263199 ಸಂಪರ್ಕಿಸಬಹುದು. ನ.30ರೊಳಗಾಗಿ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story