Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಮಮಂದಿರ ನಿರ್ಮಾಣ ಜನಾಗ್ರಹ ಸಭೆಗೆ...

ರಾಮಮಂದಿರ ನಿರ್ಮಾಣ ಜನಾಗ್ರಹ ಸಭೆಗೆ ಅನುಮತಿ ಖಂಡನೀಯ: ಎಸ್‌ಡಿಪಿಐ

‘ಖಾಸಗಿ ಸಿಟಿ ಬಸ್ ಮಾಲಕರ ಸಂಘದ ನಿರ್ಧಾರ ಖಂಡನೀಯ’

ವಾರ್ತಾಭಾರತಿವಾರ್ತಾಭಾರತಿ22 Nov 2018 9:58 PM IST
share

ಮಂಗಳೂರು, ನ.22: ರಾಮ ಮಂದಿರ ನಿರ್ಮಾಣಕ್ಕಾಗಿ ನ.25ರಂದು ಮಂಗಳೂರಿನಲ್ಲಿ ಜನಾಗ್ರಹ ಸಭೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅವಕಾಶ ನೀಡಿರುವ ನಿಲುವನ್ನು ಎಸ್‌ಡಿಪಿಐ ಖಂಡಿಸಿದೆ.

ಸಂಘ ಪರಿವಾರವು ದೇಶದಲ್ಲಿ ಮಹಾತ್ಮಾ ಗಾಂಧಿಯನ್ನು ಕೊಂದ ನಂತರ ಬಾಬರಿ ಮಸೀದಿಯನ್ನು ಕೆಡವಿದ್ದುದು ಎರಡನೇ ಭಯೋತ್ಪಾದನಾ ಕೃತ್ಯ ವಾಗಿದೆ. ಈ ಕುರಿತ ಪ್ರಕರಣ ಇದುವರೆಗೆ ಇತ್ಯರ್ಥವಾಗದೆ ಸಮಸ್ಯೆಯಲ್ಲಿರುವಾಗ ಮತ್ತೆ ರಾಮಮಂದಿರ ನಿರ್ಮಾಣಕ್ಕಾಗಿ ಜನಾಗ್ರಹ ಸಭೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೇಗೆ ಅವಕಾಶ ನೀಡಿತು ಎಂದು ಎಸ್‌ಡಿಪಿಐ ಪ್ರಶ್ನಿಸಿದೆ.

ಕಳೆದ ನಾಲ್ಕೂವರೆ ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ದೇಶವನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗುತ್ತಿಲ್ಲ. ಜನರು ಬಿಜೆಪಿಯ ವಿರುದ್ಧ ನಿಲ್ಲುವ ಸಂದರ್ಭದಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಭಾವನಾತ್ಮಕ ವಿಚಾರವನ್ನು ಮುಂದಿಟ್ಟು ಕೋಮು ಧ್ರುವೀಕರಣಕ್ಕೆ ಮುಂದಾಗಿವೆ. ರಾಮ ಮಂದಿರ ನಿರ್ಮಾಣದ ಜನಾಗ್ರಹ ಕಾರ್ಯಕ್ರಮದ ಮೂಲಕ ಮುಂದಿನ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ.

ಮಂಗಳೂರು ನಗರದಲ್ಲಿ ಸರಕಾರಿ ಬಸ್‌ಗಳ ಕೊರತೆಯಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಸಹಕಾರ ಆಗುವಂತೆ ಹೆಚ್ಚಿನ ಸರಕಾರಿ ಬಸ್‌ಗಳನ್ನು ನಿಯೋಜಿಸಬೇಕು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಈ ವಿವಾದಿತ ವಿಚಾರದ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದೆಂದು ಎಸ್‌ಡಿಪಿಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್. ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

‘ಖಾಸಗಿ ಸಿಟಿ ಬಸ್ ಮಾಲಕರ ಸಂಘದ ನಿರ್ಧಾರ ಖಂಡನೀಯ’

ಮಂಗಳೂರಿನಲ್ಲಿ ನಡೆಸುವ ವಿವಾದಿತ ವಿಚಾರದ ಕಾರ್ಯಕ್ರಮಕ್ಕೆ ಖಾಸಗಿ ಬಸ್‌ಗಳನ್ನು ಉಚಿತವಾಗಿ ನೀಡಲು ಹೊರಟಿರುವ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ನಿರ್ಧಾರ ಖಂಡನೀಯ. ಖಾಸಗಿ ಬಸ್ ಸಂಘದ ಈ ತೀರ್ಮಾನವು ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದು, ಈ ಮೊದಲೇ ಕೋಮು ಸೂಕ್ಷ್ಮ ಪ್ರದೇಶವಾಗಿರುವ ದ.ಕ. ಜಿಲ್ಲೆಯಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಧರ್ಮ ಮತ್ತು ಜಾತಿಯ ಹೆಸರಲ್ಲಿ ರಾಜಕೀಯ ಮಾಡಲು ಹೊರಟಿವೆ. ಇದು ಜಿಲ್ಲೆಯ ಶಾಂತಿ, ಸೌಹಾರ್ದ ಕೆಡಿಸುವ ಷಡ್ಯಂತ್ರವಾಗಿದೆ. ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡಿದಂತಾಗಿದೆ ಎಂದು ಎಸ್‌ಡಿಪಿಐ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X