ಕುಳೂರು: ಸೇತುವೆಯಿಂದ ನದಿಗೆ ಬಿದ್ದು ಬೈಕ್ ಸವಾರರಿಬ್ಬರು ಮೃತ್ಯು

ಮಂಗಳೂರು, ನ. 22: ನಿಯಂತ್ರಣ ತಪ್ಪಿದ ಬೈಕ್ ಸವಾರರಿಬ್ಬರು ಕೂಳೂರು ಸೇತುವೆಯಿಂದ ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ರಾತ್ರಿ 8.30ರ ಸುಮಾರಿಗೆ ನಡೆದಿದೆ.
ಆಕಾಶ್ ಭವನ ನಿವಾಸಿ ನಿಖಿಲ್ (21) ಹಾಗೂ ಕುಳೂರಿನ ವಿಜಯ್ (22) ಮೃತರು ಎಂದು ಗುರುತಿಸಲಾಗಿದೆ.
ಇವರಿಬ್ಬರು ಕುಳೂರು ಸೇತುವೆ ರಸ್ತೆಯಲ್ಲಿ ವೇಗವಾಗಿ ಬೈಕ್ ಚಲಾಯಿಸಿ, ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿ ಬೈಕ್ ಸಮೇತ ನದಿಗೆ ಬಿದ್ದಿದ್ದು, ಈ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story