ನ.23: ಸಿಎಂ ಕುಮಾರಸ್ವಾಮಿ ಮಂಡ್ಯ ಜಿಲ್ಲಾ ಪ್ರವಾಸ

ಮಂಡ್ಯ, ನ.22: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ(ನ.23) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಧ್ಯಾಹ್ನ 1.20 ಗಂಟೆಗೆ ಹೆಲಿಕಾಫ್ಟರ್ ಮೂಲಕ ಜಿಲ್ಲೆಯ ದುದ್ದ ಹೋಬಳಿ ವಿ.ಸಿ.ಫಾರಂನಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ತಲುಪಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಶಿವಳ್ಳಿ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಲಿದ್ದು, ನಂತರ ದುದ್ದ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 54 ಕೆರೆಕಟ್ಟೆಗಳಿಗೆ ಕುಡಿಯುವ ನೀರು ತುಂಬಿಸುವ ಕಾಮಗಾರಿಗಳಿಗೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.
ಸಂಜೆ 4.20 ಗಂಟೆಗೆ ಜಕ್ಕನಹಳ್ಳಿ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ, 4.45ಕ್ಕೆ ಮೇಲುಕೋಟೆ ಪ್ರವಾಸಿ ಮಂದಿರ ಆವರಣದಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಬಗ್ಗೆ ರಾಜ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು. ಸಂಜೆ 6.15 ಗಂಟೆಗೆ ಕೆರೆತೊಣ್ಣೂರು ಗ್ರಾಮದಲ್ಲಿ ಕೆರೆತೊಣ್ಣೂರು ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.







