Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಎಲ್ಲಾ ತಾಲೂಕು...

ತುಮಕೂರು: ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಮಮತೆಯ ತೊಟ್ಟಿಲು ಪ್ರಾರಂಭಿಸಲು ಎಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 Nov 2018 11:24 PM IST
share
ತುಮಕೂರು: ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಮಮತೆಯ ತೊಟ್ಟಿಲು ಪ್ರಾರಂಭಿಸಲು ಎಡಿಸಿ ಸೂಚನೆ

ತುಮಕೂರು,ನ.22: ಜಿಲ್ಲೆಯಲ್ಲಿ ತುಮಕೂರು ಜಿಲ್ಲಾಸ್ಪತ್ರೆ ಸೇರಿ ಮಧುಗಿರಿ, ಪಾವಗಡ, ಗುಬ್ಬಿ, ಚಿ.ನಾ.ಹಳ್ಳಿ, ತಿಪಟೂರು, ಕುಣಿಗಲ್ ಹಾಗೂ ತುರುವೇಕೆರೆ ತಾಲೂಕು ಆಸ್ಪತ್ರೆಗಳಲ್ಲಿ ಪ್ರಾರಂಭಿಸಿರುವಂತೆ ಶಿರಾ ಮತ್ತು ಕೊರಟಗೆರೆ ತಾಲೂಕು ಆಸ್ಪತ್ರೆಗಳಲ್ಲಿಯೂ ಮಮತೆಯ ತೊಟ್ಟಿಲನ್ನು ಪ್ರಾರಂಭಿಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಡಿಹೆಚ್‍ಓ ಡಾ.ಚಂದ್ರಿಕಾ ಅವರಿಗೆ ಸೂಚಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಜರುಗಿದ ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ತನಿಖಾ ಸಮಿತಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಹೆತ್ತವರಿಗೆ ಬೇಡದ ನವಜಾತ ಶಿಶುಗಳನ್ನು ಆರೈಕೆ ಮಾಡಲು ಈ ಮಮತೆಯ ತೊಟ್ಟಿಲನ್ನು ಪ್ರಾರಂಭಿಸಲಾಗಿದೆ. ಜಿಲ್ಲಾಸ್ಪತ್ರೆ ಹಾಗೂ ಜಿಲ್ಲೆಯ 7 ತಾಲೂಕು ಆಸ್ಪತ್ರೆಗಳಲ್ಲದೆ ತುಮಕೂರಿನ ಬಾಲಕಿಯರ ಬಾಲಮಂದಿರ ಹಾಗೂ ಕೋಟಗುಡ್ಡ, ನಾಗವಲ್ಲಿ, ನೊಣವಿನಕೆರೆ, ಹೊನ್ನವಳ್ಳಿ, ಯಡಿಯೂರು, ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ ಮಮತೆಯ ತೊಟ್ಟಿಲು ಕಾರ್ಯಾರಂಭ ಮಾಡಿದೆ. ಹೆತ್ತವರು ತಮಗೆ ಬೇಡದ ನವಜಾತ ಶಿಶುಗಳನ್ನು ಎಲ್ಲೆಂದರಲ್ಲಿ ಬಿಸಾಕಿ ಮಗುವಿನ ಪ್ರಾಣಕ್ಕೆ ಕುತ್ತು ತರುವ ಪ್ರಸಂಗಗಳು ಹೆಚ್ಚಾಗುತ್ತಿದ್ದು, ಇದರ ನಿವಾರಣೆಗಾಗಿ ಮಮತೆಯ ತೊಟ್ಟಿಲನ್ನು ಪ್ರಾರಂಭಿಸಲಾಗಿದೆ. ಯಾರೇ ಆಗಲಿ ಪೋಷಕರ ಪತ್ತೆಯಿಲ್ಲದ ನವಜಾತ ಶಿಶುಗಳನ್ನು ಕಂಡಲ್ಲಿ ಈ ಮಮತೆಯ ತೊಟ್ಟಿಲಿಗೆ ತಂದು ಒಪ್ಪಿಸಬಹುದಾಗಿದೆ. ಮಗುವನ್ನು ತೊಟ್ಟಿಲಿಗೆ ಒಪ್ಪಿಸಿದವರ ಪೂರ್ವಾಪರವನ್ನು ವಿಚಾರಿಸುವಂತಿಲ್ಲ.  ಮಗುವಿಗೆ ಸೂಕ್ತ ಪ್ರಥಮ ಚಿಕಿತ್ಸೆ ನೀಡಿದ ನಂತರ ಕುಣಿಗಲ್ ತಾಲೂಕಿನ ಭಕ್ತರ ಹಳ್ಳಿಯಲ್ಲಿ ಹೊಸದಾಗಿ ತೆರೆದಿರುವ ದತ್ತು ಕೇಂದ್ರದಲ್ಲಿ ಪಾಲನೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಖಾಸಗಿ ಶಾಲೆಗಳ ಮಕ್ಕಳು ಸೇರಿದಂತೆ ಸರ್ಕಾರಿ ಶಾಲಾ/ ಕಾಲೇಜು ಹಾಗೂ ವಿವಿಧ ಇಲಾಖೆಗಳ ವಸತಿಯುತ ಶಾಲೆಗಳ ಮಕ್ಕಳಿಗೆ 'ಗುಡ್ ಟಚ್-ಬ್ಯಾಡ್ ಟಚ್' ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಾಕಿ ಇರುವ 6 ಮಕ್ಕಳ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಬೇಕು. ಮದರಸಗಳನ್ನು ಬಾಲನ್ಯಾಯ ಕಾಯ್ದೆಯಡಿ ನೋಂದಣಿ ಮಾಡಿಸಲು ಮದರಸಾಗಳ ಮುಖ್ಯಸ್ಥರ ಸಭೆ ಕರೆದು ಅರಿವು ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ, ಭಕ್ತರಹಳ್ಳಿ ದತ್ತು ಕೇಂದ್ರದಲ್ಲಿ ಈಗಾಗಲೇ ಹೆತ್ತವರಿಗೆ ಬೇಡವಾದ 10 ನವಜಾತ ಶಿಶುಗಳನ್ನು ಪೋಷಣೆ ಮಾಡಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರಲ್ಲದೆ, ಇಲಾಖೆಯಿಂದ ವಿಶೇಷ ಪಾಲನಾ ಯೋಜನೆಯಡಿ 68 ಹೆಚ್.ಐ.ವಿ/ಏಡ್ಸ್ ಸೋಂಕಿತ ಮಕ್ಕಳು ಸೇರಿದಂತೆ ಒಟ್ಟು 456 ಹಾಗೂ ಪ್ರಾಯೋಜಿತ ಕಾರ್ಯಕ್ರಮದಡಿ ವಿವಿಧ ರೀತಿಯ ಸಂಕಷ್ಟದಲ್ಲಿರುವ 149 ಮಕ್ಕಳಿಗೆ ಆರ್ಥಿಕ ಸೌಲಭ್ಯವನ್ನು ನೀಡಲಾಗುತ್ತಿದೆ. ದಯಾಭವನ ಸ್ವಯಂ ಸೇವಾ ಸಂಸ್ಥೆಯ ಸಹಯೋಗದಲ್ಲಿ ಭಕ್ತರಹಳ್ಳಿಯಲ್ಲಿ ಪ್ರಾರಂಭಿಸಲಾಗಿರುವ ದತ್ತು ಕೇಂದ್ರದಲ್ಲಿ ಪ್ರಸ್ತುತ 9 ಮಕ್ಕಳು ದತ್ತು ನೀಡಲು ಅರ್ಹರಿರುತ್ತಾರೆ. ದತ್ತು ಪಡೆಯಲು ಬಯಸುವ ಪೋಷಕರನ್ನು ಗುರುತಿಸಿ ಮಾರ್ಗಸೂಚಿಯನ್ವಯ ದತ್ತು ನೀಡಲಾಗುವುದು ಎಂದು ತಿಳಿಸಿದರು. 

ಬಾಲನ್ಯಾಯ ಮಂಡಳಿಯ ಸದಸ್ಯೆ ಆಶಾ ಮಾತನಾಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿಯ ಸಹಕಾರದಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡದಂತೆ ಮಕ್ಕಳು ಹಾಗೂ ಪೋಷಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಅಧಿಕಾರಿಗಳು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X