ಕನಕ ಯುವ ಪುರಸ್ಕಾರಕ್ಕೆ ಜಯಪ್ರಕಾಶ್ ಶೆಟ್ಟಿ ಆಯ್ಕೆ

ಉಡುಪಿ, ನ.23: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಸಂಸ್ಥೆಯಾದ ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ನೀಡುವ 2018-19ನೇ ಸಾಲಿನ ಕನಕ ಯುವ ಪುರಸ್ಕಾರಕ್ಕೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಜಯಪ್ರಕಾಶ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇದೇ ನವೆಂಬರ್ 26ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕನಕ ಜಯಂತಿ ಆಚರಣೆ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ. ಪ್ರಶಸ್ತಿಗೆ ಆಯ್ಕೆಯಾದ ಡಾ.ಜಯಪ್ರಕಾಶ್ ಶೆಟ್ಟಿ ಅವರನ್ನು ಕಾಲೇಜಿನ ಪ್ರಾಂಶುಪಾಲರು, ಬೋಧಕ/ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿ ಸಿರುವುದಾಗಿ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
Next Story