ನ. 28ರಿಂದ ಉಚಿತ ತರಬೇತಿ ಶಿಬಿರ
ಮಂಗಳೂರು, ನ.23: ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ ಇದರ ವತಿಯಿಂದ ನ.28ರಿಂದ ಮಹಿಳೆಯರಿಗಾಗಿ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ (ವಸ್ರ ಚಿತ್ರಕಲಾ ಉದ್ಯಮ) ಕುರಿತು ತರಬೇತಿ ಶಿಬಿರವು ಮಣಿಪಾಲದಲ್ಲಿ ಹಮ್ಮಿಕೊಂಡಿದೆ.
ದ.ಕ., ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ 18 ರಿಂದ 45 ವರ್ಷ ಪ್ರಾಯದೊಳಗಿನ ನಿರುದ್ಯೋಗಿಗಳು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಊಟ - ವಸತಿ ಉಚಿತವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಹೆಸರು, ಪೂರ್ಣ ವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು ಇತ್ಯಾದಿ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಬರೆದು ನ. 26ರೊಳಗೆ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಡಿಕೇಟ್ ಬ್ಯಾಂಕ್ ಪ್ರಧಾನ ಕಚೇರಿ ಸಂಕೀರ್ಣ, ಮಣಿಪಾಲ - 576104 (ಮೊ.ಸಂ: 9449862665, 9686123850) ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.