ಉಡುಪಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದಲ್ಲಿ ವಿಶೇಷ ಉಪನ್ಯಾಸ
ಉಡುಪಿ, ನ.23:ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಕುಂದಾಪುರ ಶಾಖಾ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಾಲಾ ಮಟ್ಟದಿಂದ ಕಾಲೇಜು ಮಟ್ಟದ ವರೆಗೂ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ದೆ, ಚಿತ್ರಬಿಡಿಸುವ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳಿಗೆ ಉಪನ್ಯಾಸವನ್ನು ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಬೈಂದೂರು ಅಂಜಲಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಸುಬ್ರಹ್ಮಣ್ಯ ಭಟ್ ಇವರು ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ನೀಡಿದರು. ಮಾನಸಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡ ಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಕುಂತಳ ಕುಂದರ್ ವಂದಿಸಿ, ಕುಂದಾಪುರ ಶಾಖಾ ಗ್ರಂಥಾಲಯದ ಸಹಾಯಕ ಗ್ರಂಥಪಾಲಕ ಜಗದೀಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.
Next Story