ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕಾರ್ಕಳ, ನ. 23: ವಿಪರೀತ ಕುಡಿತದ ಚಟ ಹೊಂದಿದ್ದ ಕಲ್ಯಾ ಗ್ರಾಮದ ಪೊಲ್ಲಡ್ಕ ನಿವಾಸಿ ಯೋಗೀಶ್ (27) ಎಂಬವರು ಆರ್ಥಿಕ ತೊಂದರೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ. 23ರಂದು ಬೆಳಿಗ್ಗೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಡಾರು ಗ್ರಾಮದ ಜೋಗಿಬೆಟ್ಟು ಎಂಬಲ್ಲಿರುವ ಹಾಡಿಯಲ್ಲಿ ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story