ಭಟಕಳ ಅರ್ಬನ್ ಬ್ಯಾಂಕಿಗೆ 'ಅತ್ಯುತ್ತಮ ಸಾಧನಾ ಪ್ರಶಸ್ತಿ'

ಭಟ್ಕಳ, ನ. 24: ಶಿರಸಿಯ ಟಿ.ಎಸ್.ಎಸ್. ಆವರಣದಲ್ಲಿ ಇತ್ತೀಚೆಗೆ ಜರುಗಿದ 65ನೇ ಅಖಿಲ ಭಾರತ ಸಹಕಾರ ಸಪ್ತಾಹ 2018 ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯದ ಪ್ರತಿಷ್ಠಿತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಗೆ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ 'ಅತ್ಯುತ್ತಮ ಸಾಧನಾ ಪ್ರಶಸ್ತಿ' ಯನ್ನು ನೀಡಿ ಗೌರವಿಸಲಾಯಿತು.
ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಅವರು ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಅಬ್ದುಲ್ ಮಜೀದ್ ಚೌಗುಲೆ ಅವರಿಗೆ ಶಾಲು ಹೊದಿಸಿ, ಪ್ರಶಸ್ತಿ ಪ್ರದಾನ ಮಾಡಿದರು. ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಗ್ರಾಹಕರಿಗೆ ಅತ್ಯುನ್ನತ ಬ್ಯಾಂಕಿಂಗ್ ಸೇವೆಯನ್ನು ನೀಡುವುದರ ಮೂಲಕ ಪ್ರಚಲಿತವಾದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಹಲವಾರು ಪ್ರಶಸ್ತಿಯನ್ನು ಪಡೆದಿರುವುದು ಸ್ಮರಣೀಯ.
Next Story