ಉಡುಪಿ: ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನಕ್ಕಾಗಿ ನಗರಾಭಿವೃದ್ಧಿ ಸಚಿವರಿಗೆ ಮನವಿ

ಉಡುಪಿ, ನ. 24: ಜಿಲ್ಲೆಯ ಅಲ್ಪಸಂಖ್ಯಾತರಿಗೆ ಸರಕಾರದ ವತಿಯಿಂದ ಹೆಚ್ಚಿನ ಅನುದಾನ ಸಿಗುವಂತೆ ಶಫಾರಸು ಮಾಡಲು ಕರ್ನಾಟಕ ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾದ ಯು.ಟಿ. ಖಾದರ್ ಅವರಿಗೆ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಗುಲಾಂ ಮುಹಮ್ಮದ್ ಹೆಜಮಾರಿ ನೇತೃತ್ವದಲ್ಲಿ ಮಂಗಳೂರು ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಸಂಯೋಜಕರಾದ ಮುಹಮ್ಮದ್ ಫಾರೂಕ್ ಚಂದ್ರನಗರ, ಮಸೀದಿಯ ಅಧ್ಯಕ್ಷ ಎಂ.ಎಚ್. ಅಬ್ದುಲ್ ಹಮೀದ್, ಕಾಂಗ್ರೆಸ್ ಜಿಲ್ಲಾ ಇಂಟಕ್‌ನ ಮಾಜಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡರೂ ಆದ ದಿವಾಕರ ಡಿ. ಶೆಟ್ಟಿ ಕಳತ್ತೂರು, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಕುಲಾಲ್, ಸಂಶುದ್ದೀನ್ ಕರಂದಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Next Story