Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಎಸ್‌ಟಿ, ನೋಟುರದ್ಧತಿ ಬಂಡವಾಳಶಾಹಿ ಪರ...

ಜಿಎಸ್‌ಟಿ, ನೋಟುರದ್ಧತಿ ಬಂಡವಾಳಶಾಹಿ ಪರ ನಿಲುವು: ವರಲಕ್ಷ್ಮೀ

ವಾರ್ತಾಭಾರತಿವಾರ್ತಾಭಾರತಿ24 Nov 2018 8:46 PM IST
share
ಜಿಎಸ್‌ಟಿ, ನೋಟುರದ್ಧತಿ ಬಂಡವಾಳಶಾಹಿ ಪರ ನಿಲುವು: ವರಲಕ್ಷ್ಮೀ

ಉಡುಪಿ, ನ.24: ಜಿಎಸ್‌ಟಿ, ನೋಟು ಅಮಾನ್ಯೀಕರಣ ಎಂಬುದು ಬಂಡವಾಳಶಾಹಿಗಳ ಪರವಾದ ನಿಲುವುಗಳಾಗಿದ್ದು, ಅವರನ್ನು ಬಲಪಡಿಸಲು ಮಾಡಿರುವ ವ್ಯವಸ್ಥೆಯಾಗಿದೆ. ನೋಟು ಅಮಾನ್ಯೀಕರಣದ ಪರಿಣಾಮವಾಗಿ ದೇಶದಲ್ಲಿ 77ಲಕ್ಷ ಉದ್ಯೋಗಗಳು ನಾಶವಾಗಿವೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಆರೋಪಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ವತಿಯಿಂದ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಶನಿವಾರ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪ್ರಸ್ತುತ ಕೇಂದ್ರ ಸರಕಾರ ದೇಶದಲ್ಲಿ ಹೊಸ ಉದ್ಯೋಗ ಸೃಷ್ಠಿಯ ಬದಲು ಇದ್ದ ಉದ್ಯೋಗಗಳನ್ನು ನಾಶ ಮಾಡುತ್ತಿದೆ. 62,000 ಡಿಗ್ರೂಪ್ ಹುದ್ದೆ ಯೊಂದಕ್ಕೆ 1.09ಕೋಟಿ ಅರ್ಜಿಗಳು ಸಲ್ಲಿಕೆಯಾಗಿರುವುದು ಈ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಯಾವ ರೀತಿಯಲ್ಲಿ ಇದೆ ಎಂಬುದಕ್ಕೆ ಜ್ವಲಂತ ಸಾಕ್ಷಿಯಾಗಿದೆ. ಸಾಂಪ್ರದಾಯಿಕ ಉದ್ಯಮಗಳ ಮುಚ್ಚುಗಡೆ ಹಾಗೂ ಬೃಹತ್ ಕೈಗಾರಿಕೆಗಳಲ್ಲಿ ತಂತ್ರಜ್ಞಾನಗಳ ಅಳವಡಿಕೆಯು ಬೃಹತ್ ಸಂಖ್ಯೆಯಲ್ಲಿ ಉದ್ಯೋಗಗಳ ನಾಶಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.

ಏಳನೆ ವೇತನ ಆಯೋಗ ಕನಿಷ್ಠ ವೇತನ 18ಸಾವಿರ ರೂ. ನೀಡುವಂತೆ ಶಿಫಾರಸ್ಸು ಮಾಡಿದರೂ, ಶೇ.41ರಷ್ಟು ಅನೌಪಾಚಾರಿಕ ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ 10ಸಾವಿರ ರೂ.ಗಿಂತ ಕಡಿಮೆ ಸಂಬಳ ನೀಡಲಾಗುತ್ತಿದೆ. ಉತ್ಪಾದನೆ ಏರಿಕೆಯಾಗುತ್ತಿದ್ದರೂ ಕಾರ್ಮಿಕರ ವೇತನ ಮಾತ್ರ ಇಳಿಕೆಯಾಗು ತ್ತಿದೆ. ಇದರ ಪರಿಣಾಮ ಭಾರತದಲ್ಲಿ ಆರ್ಥಿಕ ಅಸಮಾನತೆ ಬೃಹತ್ ಪ್ರಮಾಣ ದಲ್ಲಿ ಬೆಳೆಯುತ್ತಿದೆ ಎಂದು ಅವರು ದೂರಿದರು.

ಕೇಂದ್ರ ಸರಕಾರ ರಕ್ಷಣಾ ಇಲಾಖೆಯನ್ನೇ ಖಾಸಗೀಕರಣ ಮಾಡಲು ಮುಂದಾಗಿದೆ. ಇವರಿಗೆ ದೇಶಪ್ರೇಮದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಇಂದು ನಮ್ಮನ್ನು ಆಳುವವರು ದೇಶಪ್ರೇಮಿಗಳಲ್ಲ. ಇವರು ವ್ಯಾಪಾರದ ಹೆಸರಿನಲ್ಲಿ ವಿದೇಶಿಯರಿಗೆ ಮತ್ತೊಮ್ಮೆ ಬಾಗಿಲನ್ನು ತೆರೆದಿಟ್ಟಿದ್ದಾರೆ ಎಂದು ಅವರು ಆರೋಪಿಸಿದರು.

ಹೊಸ ರಸ್ತೆ ಸುರಕ್ಷತಾ ಕಾಯಿದೆ ಜಾರಿಗೆ ಬಂದರೆ ಮುಂದೆ ರಾಜ್ಯದ ಕೆಎಸ್‌ಆರ್‌ಟಿಸಿ ಕೂಡ ಖಾಸಗೀಕರಣಗೊಳ್ಳಲಿದೆ. ಅದೇ ರೀತಿ ವಿದ್ಯುತ್ ವ್ಯವಸ್ಥೆ ಕೂಡ ಖಾಸಗೀಕರಣವಾಗಲಿದೆ. ಈಗಾಗಲೇ 600 ರೈಲ್ವೆ ನಿಲ್ದಾಣಗಳ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಿಕೊಡಲಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಕಾಪಾಡಬೇಕಾದರೆ ಸಾರ್ವಜನಿಕ ಕೈಗಾರಿಕೆಗಳ ಖಾಸಗೀಕರಣ ಮಾಡಬಾರದು ಮತ್ತು ವಿದೇಶಿ ಬಂಡವಾಳ ಬಂದರೂ ಈ ನೆಲದ ಕಾನೂನು ಗಳನ್ನು ಒಪ್ಪಬೇಕು ಎಂದರು.

ವೇದಿಕೆಯಲ್ಲಿ ಬ್ಯಾಂಕ್ ಎಂಪ್ಲಾಯಿಸ್ ಫೆಡರೇಶನ್ ಆಫ್ ಇಂಡಿಯಾದ ಬಿ.ಎಂ.ಮಾಧವ, ಸಿಐಟಿಯು ಜಿಲ್ಲಾಧ್ಯಕ್ಷ ಪಿ.ವಿಶ್ವನಾಥ ರೈ, ಎಐಟಿಯುಸಿಯ ಎಚ್.ವಿ.ರಾವ್, ಐಎನ್‌ಟಿಯುಸಿಯ ಜಿಲ್ಲಾಧ್ಯಕ್ಷ ಗಣೇಶ್ ಕೋಟ್ಯಾನ್, ಎಐಬಿಇಎಯ ಹೆರಾಲ್ಡ್ ಡಿಸೋಜ, ಎಐಐಇಎಯ ಕೆ.ವಿಶ್ವನಾಥ್, ಬಿಎಸ್ ಎನ್‌ಎಲ್ ನೌಕರರ ಯೂನಿಯನ್‌ನ ಶಶಿಧರ್ ಗೊಲ್ಲ, ಜೆಸಿಟಿಯು ಜಿಲ್ಲಾ ಸಂಚಾಲಕ ಕೆ.ಶಂಕರ್ ಉಪಸ್ಥಿತರಿದ್ದರು.

ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ

ಕಾರ್ಮಿಕರ ಪ್ರಬಲ ಶಸ್ತ್ರವಾಗಿರುವ 44 ಕಾರ್ಮಿಕ ಕಾನೂನುಗಳನ್ನು ಕೇಂದ್ರ ಸರಕಾರ ಬಂಡವಾಳಶಾಹಿಗಳ ಪರವಾಗಿ ಮಾಡುವುದಕ್ಕಾಗಿ ತಿದ್ದುಪಡಿ ಮಾಡಲು ಹೊರಟಿದೆ. ಈ ಮೂಲಕ ಬಂಡವಾಳಶಾಹಿಗಳನ್ನು ಮತ್ತಷ್ಟು ಬಲ ಪಡಿಸಲಾಗುತ್ತಿದೆ. ಇದು ಬಹಳ ದೊಡ್ಡ ಅಪಾಯವಾಗಿದೆ ಎಂದು ವರಲಕ್ಷ್ಮೀ ಹೇಳಿದರು.

ಈಗಿರುವ ಯಾವುದೇ ಕಾರ್ಮಿಕ ಕಾನೂನುಗಳು ಕಾರ್ಮಿಕರ ನೆರವಿಗೆ ಬರುತ್ತಿಲ್ಲ. ಈಗಿನ ಸರಕಾರ ಬಂಡವಾಳಶಾಹಿಗಳ ಪರವಾಗಿ ನಿಂತಿದೆಯೇ ಹೊರತು ಕಾರ್ಮಿಕ, ರೈತರು, ಬಡವರ ಪರವಾಗಿ ಅಲ್ಲ. ಇಲ್ಲಿನ ಆರ್ಥಿಕ ನೀತಿ ಕೂಡ ಬಂಡವಾಳಶಾಹಿಗಳಿಗೆ ಬೆಂಬಲವಾಗಿ ಇದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X