ಮಕ್ಕಳ ಪ್ರತಿಭೆಯನ್ನು ಪೋಷಕರು ಪ್ರೋತ್ಸಾಹಿಸಿ: ದಿನಕರ ಬಾಬು

ಉಡುಪಿ, ನ.24: ಮಕ್ಕಳಲ್ಲಿರುವ ಪ್ರತಿಭೆಯನ್ನು ಶಾಲೆಯಲ್ಲಿ ಶಿಕ್ಷಕರು ಗುರುತಿಸುತ್ತಾರೆ. ಆದರೆ ಆ ಪ್ರತಿಭೆಯನ್ನು ಪ್ರೋತ್ಸಾಹಿಸುವ ಜವಾಬ್ದಾರಿ ಪೋಷಕರದ್ದಾಗಿದೆ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಹೇಳಿದ್ದಾರೆ.
ಶನಿವಾರ ಬ್ರಹ್ಮಗಿರಿಯಲ್ಲಿರುವ ಬಾಲಭವನದಲ್ಲಿ ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿ ಉಡುಪಿ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಕ್ಕಳಿಗೆ ಆಯೋಜಿಸಿದ್ದ ವಿವಿಧ ಕಾರ್ಯಕ್ರಮ ಗಳನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಶನಿವಾರ ಬ್ರಹ್ಮಗಿರಿಯಲ್ಲಿರುವ ಬಾಲವನದಲ್ಲಿಕರ್ನಾಟಕರಾಜ್ಯಬಾಲವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲವನಸೊಸೈಟಿಉಡುಪಿವತಿಯಿಂದಕನ್ನಡರಾಜ್ಯೋತ್ಸವಅಂಗವಾಗಿಮಕ್ಕಳಿಗೆಆಯೋಜಿಸಿದ್ದವಿವಿ ಕಾರ್ಯಕ್ರಮ ಗಳನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಿ ಅವರಿಗೆ ಅವಕಾಶ ನೀಡಿದಲ್ಲಿ ಉತ್ತಮ ಪ್ರತಿಭಾವಂತರು ಬೆಳಕಿಗೆ ಬರುತ್ತಾರೆ.
ಮಕ್ಕಳಿಗೆ ಪೋಷಕರು ನೀಡುವ ಬೆಂಬಲ ಹೆಚ್ಚಿನ ಸಾಧನೆ ಮಾಡಲು ಪ್ರೇರೇಪಣೆ ನೀಡುತ್ತದೆ. ಉತ್ತಮ ಪ್ರತಿಭೆ ಹೊಂದಿರುವ ಮಕ್ಕಳು ಸಮಾಜದ ಆಸ್ತಿ. ಈ ಮಕ್ಕಳು ಸತ್ಪ್ರಜೆಗಳಾಗಿ ರೂಪು ಗೊಂಡು, ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣರಾಗುತ್ತಾರೆ ಎಂದು ದಿನಕರ ಬಾಬು ಹೇಳಿದರು.
ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿ, ಮಕ್ಕಳನ್ನು ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತಗೊಳಿಸಿದೆ, ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸುವುದು ಅಗತ್ಯ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ವಿಕಸನ ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ಉಪಸ್ಥಿತರಿದ್ದರು. ಉಡುಪಿ ತಾಲೂಕು ಶಿಶು ಅಭಿವೃಧ್ದಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿ ಸರ್ವೇಶ್ವರ್ ವಂದಿಸಿದರು.
ಮಕ್ಕಳಿಗಾಗಿ ಚಿತ್ರಕಲೆ, ರಂಗೋಲಿ, ಛದ್ಮವೇಷ ಹಾಗೂ ಕನ್ನಡಗೀತೆಗ ಗಾಯನ ಸ್ಪರ್ಧೆಗಳು ನಡೆದವು.