ಇನ್ನಾ ಗ್ರಾಪಂನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ
ಉಡುಪಿ, ನ.24: ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರ್ಕಳ ತಾಲೂಕಿನ ಇನ್ನಾ ಗ್ರಾಪಂನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಬಬಿತಾ ಇವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು.
ಜಿಲ್ಲಾ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿಜಿ.ಐ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಗ್ರಂಥಾಲಯ ಮಹತ್ವವನ್ನು ವಿವರಿಸಿದರು. ಗ್ರಾಪಂ ವ್ಯಾಪ್ತಿಯ ಎಲ್ಲಾ ಅರ್ಹ ಮಕ್ಕಳಿಗೆ ಗಾಯನ, ಆಶು ಭಾಷಣ, ರಸ ಪ್ರಶ್ನೆ ಸ್ಪರ್ಧೆ, ಛದ್ಮವೇಷ ಸ್ಪರ್ಧೆ ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷ ಕುಶ ಆರ್. ಮೂಲ್ಯ, ಸದಸ್ಯರಾದ ಅಲೆನ್ ಡಿಸೋಜ, ದೀಪಕ್ ಕೋಟ್ಯಾನ್, ರೂಪಾ ಆರ್ ಕೋಟ್ಯಾನ್, ಶರ್ಮಿಳಾ, ಸರಿತಾ ಶೆಟ್ಟಿ, ನ್ಯಾನ್ಸಿ ಡಿಸಿಲ್ವಾ, ಗ್ರಾಪಂನ ಮಾಜಿ ಅಧ್ಯಕ್ಷ ಜಾನ್ ಮೆಂಡೋನ್ಸಾ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಕಾಶ್‌ರಾವ್ ಪಿ.ಎನ್. ಶಿಕ್ಷಕರಾದ ಸುಧಾಕರ ಆಚಾರ್ಯ, ರಾಜೇಂದ್ರ ಭಟ್ ಉಪಸ್ಥಿತರಿದ್ದರು. ಪಿಡಿಒ ಮಹೇಶ್ ಎಸ್. ಎಚ್. ನಿರೂಪಿಸಿದರು.
Next Story