ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆ ಮುಂದೂಡಿಕೆ
ಮಂಗಳೂರು, ನ.24: ದ.ಕ. ಜಿಲ್ಲಾ ಪೊಲೀಸ್ ಘಟಕಕ್ಕೆ ಸಂಬಂಧಿಸಿದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಪುರುಷ/ಮಹಿಳಾ)ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ನ.25ರಂದು ನಡೆಸಲು ಉದ್ದೇಶಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಮುಂದಿನ ಲಿಖಿತ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ನೇಮಕಾತಿ ಪ್ರಕಟನೆ ತಿಳಿಸಿದೆ.
Next Story