ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಆರೋಗ್ಯ ತಪಾಸಣೆ ಶಿಬಿರ

ಉಡುಪಿ, ನ.24: ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದ ವಿಚಾರಣಾಧೀನ ಕೈದಿಗಳು ಹಾಗೂ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ಮಣಿಪಾಲ ಕೆಎಂಸಿಯ ಚರ್ಮರೋಗ ತಜ್ಞ ಸತೀಶ್ ಪೈ ಹಾಗೂ ಮಾನಸಿಕ ತಜ್ಞ ತಿಪ್ಪೇಸ್ವಾಮಿ ಮತ್ತು ಇತರ ವೈದ್ಯರ ತಂಡವು 117 ಮಂದಿ ವಿಚಾರಣಾಧೀನ ಕೈದಿಗಳು ಮತ್ತು ಸಿಬ್ಬಂದಿಗಳ ಆರೋಗ್ಯ ತಪಾಸಣೆ ನಡೆಸಿತು. ಈ ಸಂದರ್ಭದಲ್ಲಿ ಜೈಲು ಅಧಿಕಾರಿ ಸಂಜಯ್ ಜತ್ತಿ ಉಪಸ್ಥಿತರಿದ್ದರು.
Next Story