ಸೀತಾನದಿಯಲ್ಲಿ ಮೃತದೇಹ ಪತ್ತೆ
ಬ್ರಹ್ಮಾವರ, ನ.24: ಬಾರ್ಕೂರು ಸೇತುವೆ ಬಳಿ ಸೀತಾನದಿಯ ನೀರಿನಲ್ಲಿ ಸುಮಾರು 30 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಮೃತದೇಹವು ಕೊಳೆತ ಸ್ಥಿತಿಯಲ್ಲಿದ್ದು, ಸುಮಾರು ಎರಡು ಮೂರು ದಿನಗಳ ಹಿಂದೆ ಈ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ನೀರಿಗೆ ಹಾರಿ ಮೃತಪಟ್ಟಿರಬಹುದೆಂದು ಶಂಕಿಸ ಲಾಗಿದೆ.
ಈ ಬಗ್ಗೆ ಬ್ರಹ್ಮಾವರ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





