ಅಂಬರೀಶ್ ನಿಧನ ಹಿನ್ನೆಲೆ: ಮಂಡ್ಯ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

ಮಂಡ್ಯ, ನ.25: ಹಿರಿಯ ಚಲನಚಿತ್ರ ನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಂಡ್ಯ ಜಿಲ್ಲಾದ್ಯಂತ ನ.25ರಂದು ಬೆಳಗ್ಗೆ 6 ಗಂಟೆಯಿಂದ ನ.26ರ ಬೆಳಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಆದೇಶ ಹೊರಡಿಸಿದ್ದಾರೆ.
ಮದ್ಯ ಮಾರಾಟಕ್ಕೆ ನಿಷೇಧ
ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನ.25ರಂದು ಬೆಳಗ್ಗೆ 6 ಗಂಟೆಯಿಂದ ನ.26ರ ಮಧ್ಯರಾತ್ರಿ 12 ಗಂಟೆಯವರೆಗೆ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತರಹದ ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಣೆ ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಿ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಆದೇಶ ಹೊರಡಿಸಿದ್ದಾರೆ.
Next Story





