ಕೊಡುಂಗಾಯಿ: ಶಿಕ್ಷಕರ ಮನೆಯಿಂದ ನಗದು ಕಳವು

ಬಂಟ್ವಾಳ, ನ.25: ಶಿಕ್ಷಕರೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಸಾವಿರ ರೂ. ನಗದು ದೋಚಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರಿನ ಕೊಡುಂಗಾಯಿ ಎಂಬಲ್ಲಿ ನಡೆದಿದೆ. ಈ ಬಗ್ಗೆ ಶನಿವಾರ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲಪಡ್ನೂರು ಕೊಡುಂಗಾಯಿ ನಿವಾಸಿ ಗೋಳ್ತಮಜಲು ಶಾಲಾ ಶಿಕ್ಷಕ ಪ್ರಭಾಕರ ಶೆಟ್ಟಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಇವರ ಪತ್ನಿಯೂ ಶಿಕ್ಷಕಿಯಾಗಿದ್ದು, ಮಕ್ಕಳು ಶಾಲೆಗೆ ಹೋಗಿದ್ದರು. ಬೆಳಗ್ಗೆ ಹೋದವರು ಸಂಜೆ ಮನೆಗೆ ಹಿಂದಿರುಗಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು 10 ಸಾವಿರ ನಗದು ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕೆ ವಿಟ್ಲ ಉಪನಿರೀಕ್ಷಕ ಯಲ್ಲಪ್ಪ ಅವರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story