ಅಯೋಧ್ಯೆಯಲ್ಲಿ 221 ಮೀ. ಎತ್ತರದ ಶ್ರೀರಾಮ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಆದಿತ್ಯನಾಥ್ ಸರಕಾರ
ಲಕ್ನೋ, ನ.25: ಗುಜರಾತ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಸ್ಥಾಪನೆ ನಂತರ ಇದೀಗ ಉತ್ತರ ಪ್ರದೇಶ ಸರಕಾರ ಅಯೋಧ್ಯೆಯಲ್ಲಿ 221 ಮೀಟರ್ ಎತ್ತರದ ಶ್ರೀರಾಮ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದೆ.
221 ಮೀಟರ್ ಎತ್ತರದ ಕಂಚಿನ ಪ್ರತಿಮೆ ಇದಾಗಿರಲಿದೆ. ಅಯೋಧ್ಯೆಯಲ್ಲಿರುವ ಸರಯೂ ನದಿ ತೀರದಲ್ಲಿ ಸ್ಥಾಪನೆಯಾಗಲಿದೆ ಎಂದು ಉತ್ತರ ಪ್ರದೇಶ ಸರಕಾರ ಬಿಡುಗಡೆಗೊಳಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ. ಅಯೋಧ್ಯೆಯಲ್ಲಿ ಶಿವಸೇನೆ, ವಿಎಚ್ ಪಿ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಕಾರ್ಯಕ್ರಮ ಆಯೋಜಿಸಿರುವ ನಡುವೆ ಈ ಘೋಷಣೆ ಮಾಡಲಾಗಿದೆ.
Next Story