ಖ್ಯಾತ ನಟ ಅಂಬರೀಶ್, ಕೇಂದ್ರದ ಮಾಜಿ ಸಚಿವ ಜಾಫರ್ ನಿಧನ: ದ.ಕ ಜಿಲ್ಲಾ ಕಾಂಗ್ರೆಸ್ ಸಂತಾಪ
ಮಂಗಳೂರು, ನ.25: ಖ್ಯಾತ ನಟ, ಮಾಜಿ ಸಚಿವ ಅಂಬರೀಶ್ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಶರೀಫ್‌ರವರ ನಿಧನಕ್ಕೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಈ ಇಬ್ಬರು ಹಿರಿಯ ಕಾಂಗ್ರೆಸ್ ನಾಯಕರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.
ಜಾಫರ್ ಶರೀಫ್ ಹಾಗೂ ಅಂಬರೀಶ್ ರಾಜ್ಯದ ಅಭಿವೃದ್ಧಿಯ ಪ್ರತೀಕವಾಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ರಾಜ್ಯಸಭೆಯ ಮಾಜಿ ಸದಸ್ಯ ಬಿ. ಇಬ್ರಾಹೀಂ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ವಸಂತ ಬಂಗೇರ, ಜೆ.ಆರ್. ಲೋಬೊ, ಪಕ್ಷದ ಮುಖಂಡರಾದ ಡಾ.ರಘು, ಬರಾಜ್ ರೈ, ಹರ್ಷರಾಜ್ ಮುದ್ಯ, ಬಿ.ಎಚ್. ಖಾದರ್, ಕೋಡಿಜಾಲ್ ಇಬ್ರಾಹೀಂ, ಶಶಿಧರ್ ಹೆಗ್ಡೆ, ಸುರೇಶ್ ಬಳ್ಳಾಲ್, ಮೇಯರ್ ಭಾಸ್ಕರ್ ಕೆ, ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಪಂ ಸದಸ್ಯರಾದ ಕೆ.ಕೆ. ಶಾಹುಲ್ ಹಮೀದ್, ಆರ್.ಕೆ. ಪೃಥ್ವಿರಾಜ್, ಚಂದ್ರಪ್ರಕಾಶ್ ಶೆಟ್ಟಿ, ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಎನ್.ಎಸ್ ಕರೀಂ, ಕೆ. ಅಶ್ರಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್, ಪ್ರಧಾನ ಕಾರ್ಯದರ್ಶಿಗಳಾದ ನೀರಜ್ ಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಕಾರ್ಪರೇಟರ್‌ಗಳಾದ ಅಬ್ದುರ್ರವೂಫ್, ಎ.ಸಿ.ವಿನಯರಾಜ್, ಲತೀಫ್ ಕಂದಕ್, ಆಶಾ ಡಿಸಿಲ್ವಾ, ಜಿಲ್ಲಾ ಕಾಂಗ್ರೆಸ್ ವಕ್ತಾರ ಖಾಲಿದ್ ಉಜಿರೆ, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ಆರಿಫ್ ಬಾವ, ಪ್ರೇಮ್ ಬಳ್ಳಾಲ್‌ಬಾಗ್ ಸಂತಾಪ ಸೂಚಿಸಿದ್ದಾರೆ.