ಉಳ್ಳಾಲ: 'ಸೀರತ್ ಅಭಿಯಾನ' ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಉಳ್ಳಾಲ, ನ. 25: ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಮತ್ತು ಉಳ್ಳಾಲ ನಗರ ಸಭೆಯ ಜಂಟಿ ಆಶ್ರಯದಲ್ಲಿ ಪ್ರವಾದಿ ಮುಹಮ್ಮದ್ (ಸ) 'ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ' ರಾಜ್ಯವ್ಯಾಪಿ ಸೀರತ್ ಅಭಿಯಾನದ ಪ್ರಯುಕ್ತ ಬಬ್ಬುಕಟ್ಟೆ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಉಳ್ಳಾಲ ನಗರ ಸಭೆಯ ಪೌರಾಯುಕ್ತೆ ವಾಣಿ ಆಳ್ವ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉಳ್ಳಾಲ ನಗರ ಸಭೆಯ ಸದಸ್ಯರಾದ ಮುಶ್ತಾಕ್ ಪಟ್ಲ, ದಿನಕರ ಉಳ್ಳಾಲ, ನಗರ ಸಭೆಯ ಆರೋಗ್ಯ ಇಲಾಖೆಯ ಮೇಲ್ವಿಚಾರಕ ರಾಜೇಶ್, ವೆಲ್ಫೇರ್ ಪಾರ್ಟಿಯ ದ.ಕ. ಜಿಲ್ಲಾ ಉಪಾಧ್ಯಕ್ಷ ಸಲಾಂ ಸಿ.ಎಚ್., ಅಲ್ ಫುರ್ಕಾನ್ ವಿದ್ಯಾಸಂಸ್ಥೆಯ ಇಸಾಕ್ ಕಲ್ಲಾಪು ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಅಧ್ಯಕ್ಷ ಕರೀಮ್ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.
Next Story