ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಉಡುಪಿ, ನ.25: ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವವು ರವಿವಾರ ಕಲ್ಯಾಣಪುರದಲ್ಲಿ ಜರಗಿತು.
ಪರಮಪ್ರಸಾದ ಮೆರವಣಿಗೆ ಹಾಗೂ ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನಲ್ಲಿ ನಡೆದ ಕ್ರಿಸ್ತರಾಜರ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ವಹಿಸಿ ಭಕ್ತಾದಿಗಳಿಗೆ ಆಶೀರ್ವಚನ ನೀಡಿದರು.
ಬಳಿಕ ಪರಮಪ್ರಸಾದವನ್ನು ವಿಶೇಷವಾಗಿ ಅಲಂಕರಿಸಲ್ಪಟ್ಟ ತೆರೆದ ವಾಹನ ದಲ್ಲಿ ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನಿಂದ ಮಿಲಾಗ್ರಿಸ್ ಕ್ಯಾಥೆಡ್ರಲ್ ತನಕ ರಾಜಬೀದಿಯಲ್ಲಿ ಮೆರವಣಿಗೆಯ ಮೂಲಕ ಕೊಂಡೊಯು್ದ ಬಹಿರಂಗ ಗೌರವ ಸಲ್ಲಿಸಲಾಯಿತು.
ಮಿಲಾಗ್ರಿಸ್ ಕ್ಯಾಥೆಡ್ರಲ್‌ಗೆ ತಲುಪಿದ ಬಳಿಕ ಪಾಂಗಾಳ ಸಂತ ಜೋನರ ದೇವಾಲಯದ ಸಹಾಯಕ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಉಜ್ವಾಡ್ ಪತ್ರಿಕೆಯ ನಿಯೋಜಿತ ಸಂಪಾದಕ ವಂ.ರೋಯ್ಸನ್ ಫೆರ್ನಾಂಡಿಸ್ ಪರಮ ಪ್ರಸಾದ ಆರಾಧನೆಯನ್ನು ನೆರವೇರಿಸಿ, ಪರಮ ಪ್ರಸಾದವು ಏಕತೆ, ತ್ಯಾಗ ಹಾಗೂ ಕ್ಷಮೆಯ ಸಂಕೇತವಾಗಿದೆ. ಪ್ರೀತಿ, ಸೇವೆ ಕ್ರೆಸ್ತ ಧರ್ಮದ ಮೂಲ ತತ್ವವಾಗಿದ್ದು, ಅದನ್ನು ನಮ್ಮ ನೆರೆಹೊರೆಯವರಲ್ಲಿ ತೋರ್ಪಡಿಸಬೇಕೆಂದರು.
ಉಡುಪಿ ಧರ್ಮಪ್ರಾಂತ್ಯವ್ಯಾಪ್ತಿಯ 52 ಚರ್ಚ್‌ಗಳಿಂದ ಸುಮಾರು 3000 ಕ್ಕೂ ಅಧಿಕ ಮಂದಿ ಭಕ್ತಾದಿಗಳು, 50ಕ್ಕೂ ಅಧಿಕ ಧರ್ಮಗುರುಗಳು, 100ಕ್ಕೂ ಅಧಿಧಕ ಧರ್ಮಭಗಿನಿಯರು ಭಾಗವಹಿಸಿದ್ದರು.
ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಬ್ಯಾಪ್ಟಿಸ್ಟ್ ಮಿನೇಜಸ್, ಕುಲಪತಿ ವಂ.ಸ್ಟ್ಯಾನಿ ಬಿ.ಲೋಬೊ, ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನ ರೆಕ್ಟರ್ ವಂ.ಡಾ.ಲೊರೇನ್ಸ್ ಡಿಸೋಜ, ಶಿರ್ವ ವಲಯ ಪ್ರಧಾನ ಧರ್ಮಗುರು ವಂ.ಡೆನಿಸ್ ಡೇಸಾ, ಕಾರ್ಕಳ ವಲಯ ಪ್ರಧಾನ ಧರ್ಮಗುರು ವಂ.ಜೊಸ್ವಿ ಫೆರ್ನಾಂಡಿಸ್, ಉಡುಪಿ ವಲಯ ಪ್ರಧಾನ ಧರ್ಮಗುರು ವಂ. ವಲೇರಿಯನ್ ಮೆಂಡೊನ್ಸಾ, ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನ ಪ್ರಧಾನ ಧರ್ಮಗುರು ವಂ.ಡಾ.ಲೆಸ್ಲಿ ಡಿಸೋಜ, ಮಿಲಾಗ್ರಿಸ್ ಕ್ಯಾಥೆಡ್ರಲ್ನ ಸಹಾಯಕ ಧರ್ಮಗುರು ವಂ.ಕೆನ್ಯೂಟ್ ನೊರೊನ್ಹಾ, ಅತ್ತೂರು ಸಂತ ಲಾರೆನ್ಸ್ ಬಾಸಿಲಿಕದ ವಂ.ಜೋರ್ಜ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.