ನ.27ರಿಂದ ಮರಳು ಮಸ್ಯೆ ವಿರೋಧಿಸಿ ಅಹೋರಾತ್ರಿ ಧರಣಿ
ಕುಂದಾಪುರ, ನ.25: ಜಿಲ್ಲೆಯ ಮರಳು ಸಮಸ್ಯೆ ಪರಿಹರಿಸುವಲ್ಲಿ ಜನಪ್ರತಿ ನಿಧಿಗಳು ಮತ್ತು ಸರಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ಸರಕಾರ ಮಧ್ಯ ಪ್ರವೇಶಿ ಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರಿಂದ ಜಿಲ್ಲಾಧಿಕಾರಿ ಕಛೇರಿ ಎದುರು ನ.27ರಂದು ಬೆಳಗ್ಗೆ 11ಗಂಟೆ ಯಿಂದ ಅಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ.
ನ. 28ರಂದು ಉಡುಪಿ ಜಿಲ್ಲೆಯ ಎಲ್ಲಾ ಗ್ರಾಪಂಗಳಿಗೆ ಕಟ್ಟಡ ಕಾರ್ಮಿಕರು ಮೆರವಣಿಗೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ನ.30ರಂದು ಮಧ್ಯಾಹ್ನ 2.30ಗಂಟೆಗೆ ಜಿಲ್ಲೆಯ ಕಾರ್ಮಿಕರು ಮಣಿಪಾಲ ಟೈಗರ್ ಸರ್ಕಲ್ ಬಳಿಯಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಧರಣಿ ನಡೆಸಲಿರುವರು ಎಂದು ಸಮಿತಿಯ ಸಂಚಾಲಕರಾದ ಸುರೇಶ್ ಕಲ್ಲಾಗರ ಹಾಗೂ ಶೇಖರ ಬಂಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story