Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಅಕ್ರಮ ಚಟುವಟಿಕೆಗಳ...

ಚಿಕ್ಕಮಗಳೂರು: ಅಕ್ರಮ ಚಟುವಟಿಕೆಗಳ ಬೀಡಾಗುತ್ತಿರುವ ಕಲ್ಲತ್ತಗಿರಿ ಪ್ರವಾಸಿತಾಣ

ಪ್ರತಿನಿತ್ಯ ಎಗ್ಗಿಲ್ಲದೆ ನಡೆಯುತ್ತಿದೆ ಕಿಡಿಗೇಡಿಗಳ ಮೋಜು-ಮಸ್ತಿ

ಕೆ.ಎಲ್. ಶಿವುಕೆ.ಎಲ್. ಶಿವು25 Nov 2018 11:14 PM IST
share
ಚಿಕ್ಕಮಗಳೂರು: ಅಕ್ರಮ ಚಟುವಟಿಕೆಗಳ ಬೀಡಾಗುತ್ತಿರುವ ಕಲ್ಲತ್ತಗಿರಿ ಪ್ರವಾಸಿತಾಣ

ಚಿಕ್ಕಮಗಳೂರು, ನ.25: ಪ್ರವಾಸಿಗರ ಸ್ವರ್ಗವಾಗಿರುವ ಕಾಫಿನಾಡಿನ ಪ್ರಾಕೃತಿಕ ಸೌಂದರ್ಯಕ್ಕೆ ಬೆರಗಾಗದವರಿಲ್ಲ ಎಂದರೆ ತಪ್ಪಾಗಲಾರದು.  ಮುಳ್ಳಯ್ಯನಗಿರಿ, ಬಾಬಾ ಬುಡಾನ್‌ಗಿರಿ ಶ್ರೇಣಿ ಜೀವವೈವಿಧ್ಯಗಳ ಬೀಡಾಗಿದ್ದು, ಇಲ್ಲಿನ ಸ್ವಚ್ಛಂದ ಪರಿಸರದಲ್ಲಿನ ಜರಿ, ಜಲಪಾತಗಳು ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿವೆ. ಈ ಕಾರಣಕ್ಕೆ ಮುಳ್ಳಯ್ಯನಗಿರಿ, ಬಾಬಾ ಬುಡಾನ್‌ಗಿರಿ ಶ್ರೇಣಿ ವ್ಯಾಪ್ತಿಯಲ್ಲಿನ ಸುಂದರ ಪರಿಸರ ವೀಕ್ಷಣೆಗೆ ವೀಕೆಂಡ್‌ಗಳಲ್ಲಿ ನಾಡಿನ ಮೂಲೆ ಮೂಲೆಗಳಿಂದ ಬರುತ್ತಾರೆ. ಹೀಗೆ ಸುಂದರ ಪರಿಸರವನ್ನು ಆಹ್ಲಾದಿಸಲು ಬರುವ ಪ್ರವಾಸಿಗರ ಒಂದೆಡೆಯಾದರೆ, ಮತ್ತೊಂದೆಡೆ ಮೋಜು ಮಸ್ತಿಗಾಗಿ ಬಂದು ಇಲ್ಲಿನ ಪರಿಸರವನ್ನು ಅಂದಗೆಡಿಸುತ್ತಿರುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಪರಿಸರ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ತರೀಕೆರೆ ತಾಲೂಕು, ಲಿಂಗದಹಳ್ಳಿ ವ್ಯಾಪ್ತಿಯಲ್ಲಿರುವ ಹಾಗೂ ಮುಳ್ಳಯ್ಯನಗಿರಿ, ಬಾಬಾ ಬುಡಾನ್‌ಗಿರಿ ಶ್ರೇಣಿ ವ್ಯಾಪ್ತಿಯಲ್ಲಿರುವ ಕೆಮಣ್ಣುಗುಂಡಿ ಪ್ರವಾಸಿ ಕೇಂದ್ರಕ್ಕೆ ಹೋಗುವ ದಾರಿ ಮಧ್ಯೆ ಸಿಗುವ ಕಲ್ಲತ್ತಗಿರಿ ಜಲಪಾತ ಜಿಲ್ಲೆಯ ಇಲ್ಲಿನ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರಕೃತಿಯ ವಿಸ್ಮಯ ಎಂಬಂತೆ ವರುಷದ 365 ದಿನಗಳ ಕಾಲವೂ ತುಂಬಿ ಹರಿಯುವ ಈ ಜಲಪಾತದ ರಮಣೀಯ ಸೊಬಗನ್ನು ಮುಳ್ಳಯ್ಯನಗಿರಿ, ಬಾಬಾಬುಡಾನ್‌ಗಿರಿ, ಕೆಮ್ಮಣ್ಣುಗುಂಡಿ ಪ್ರವಾಸಕ್ಕೆ ಬರುವ ಪ್ರವಾಸಿಗರು ಸವಿಯದೇ ಮುಂದಡಿ ಇಡಲಾರರು. ಆದರೆ ತಣ್ಣನೆಯ ವಾತಾವರಣದಲ್ಲಿ ಕಣ್ಣಿಗೆ ಮುದ ನೀಡುವ ಈ ಜಲಪಾತದ ಸೊಬಗು ಸವಿಯಲು ಬರುವ ಪ್ರವಾಸಿಗರಿಗಿಂತ ಜಲಪಾತದ ಸುತ್ತಮುತ್ತ ಮೋಜು ಮಸ್ತಿಗೆ ಬರುವವರ ಸಂಖ್ಯೆ ಇತ್ತೀಚೆಗೆ ಹೆಚ್ಚುತ್ತಿದೆ ಎಂದು ಜಿಲ್ಲೆಯ ಪರಿಸರಪ್ರಿಯರು ಆರೋಪಿಸುತ್ತಿದ್ದು, ಈ ಸುಂದರ ಪ್ರಾಕೃತಿಕ ತಾಣ ನಿಧಾನವಾಗಿ ಕಿಡಿಗೇಡಿಗಳು, ಮದ್ಯಪಾನ ಪ್ರಿಯರಿಂದಾಗಿ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿ ಪರಿಣಮಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲಾಕೇಂದ್ರದಿಂದ ತರೀಕೆರೆ ಪಟ್ಟಣ ಸಂಪರ್ಕಿಸುವ ಲಿಂಗದಹಳ್ಳಿ ಮಾರ್ಗವಾಗಿ ಜಿಲ್ಲೆಯ ಪ್ರಮುಖ ಗಿರಿಧಾಮವಾಗಿರುವ ಕೆಮ್ಮಣ್ಣುಗುಂಡಿಗೆ ಹೋಗುವ ರಸ್ತೆ ಮಧ್ಯೆ ಸಿಗುವ ಕಲ್ಲತ್ತಗಿರಿ ಜಲಪಾತ ಪ್ರಕೃತಿ ನಿರ್ಮಿಸಿದ ಸುಂದರ ತಾಣ. ಕೆಮ್ಮಣ್ಣುಗುಂಡಿ ಗಿರಿಧಾಮ ನೋಡಲು ಬರುವ ಪ್ರವಾಸಿಗರು ದಾರಿ ಮಧ್ಯೆ ಸಿಗುವ ರುದ್ರರಮಣೀಯ ಜಲಪಾತದ ಸೊಬಗು ಸವಿಯುತ್ತಾರೆ. ಆದರೆ ಇತ್ತೀಚೆಗೆ ಇಲ್ಲಿ ಮದ್ಯಪಾನ, ಧೂಮಪಾನ ಮಾಡುತ್ತಾ ಮೋಜು ಮಾಡಲು ಬರುವವರ ಸಂಖ್ಯೆ ಹೆಚ್ಚುತ್ತಿದ್ದು, ಪರಿಸರದ ಸುತ್ತಮುತ್ತ ಮದ್ಯದ ಬಾಟಲಿಗಳು, ಪೌಚ್‌ಗಳು, ಸಿಗರೇಟು ಪ್ಯಾಕ್‌ಗಳು ಹೆಜ್ಜೆ ಹೆಜ್ಜೆಗೂ ಹರಡಿಕೊಂಡು ಬಿದ್ದಿರುತ್ತವೆೆ. ಬೆಂಗಳೂರು, ಮೈಸೂರು ಮತ್ತಿತರ ಮಹಾನಗರಗಳಿಂದ ವಾರಾಂತ್ಯದಲ್ಲಿ ಪ್ರವಾಸಕ್ಕೆ ಬರುವ ಕೆಲ ಶ್ರೀಮಂತ ಯುವಕರು ಪ್ರವಾಸ ಮುಗಿಸಿ ಹೋಗುವಾಗ ಪಾರ್ಟಿ, ಮೋಜು, ಮಸ್ತಿ ಹೆಸರಿನಲ್ಲಿ ಮದ್ಯಪಾನ ಮಾಡುವುದಲ್ಲದೆ ಪಾರ್ಟಿಯ ತ್ಯಾಜ್ಯವಸ್ತುಗಳನ್ನು ಎಲ್ಲೆಂದರಲ್ಲಿ ಎಸೆದು ಪ್ರವಾಸಿ ತಾಣದ ಅಂದಗೆಡಿಸುತ್ತಿದ್ದಾರೆ. ಚಿಕ್ಕಮಗಳೂರು, ತರೀಕೆರೆ ಮಾರ್ಗವಾಗಿ ಕೆಮ್ಮಣ್ಣುಗುಂಡಿ ಪ್ರವಾಸಕ್ಕೆ ಬರುವ ಮಾರ್ಗದಲ್ಲಿ ಕೆಲವೆಡೆ ಚೆಕ್‌ಪೋಸ್ಟ್‌ಗಳಿವೆ. ಆದರೆ ಇಲ್ಲಿ ಪ್ರವಾಸಿಗರ ವಾಹನಗಳನ್ನು ತಪಾಸಣೆ ಮಾಡಿ, ಮದ್ಯದ ಬಾಟಲಿಗಳನ್ನು ಕೊಂಡೊಯ್ಯಲು ಅವಕಾಶ ನೀಡದಿದ್ದಲ್ಲಿ ಇಲ್ಲಿನ ಪರಿಸರ ಉಳಿಯುತ್ತದೆ ಎಂದು ಕಲ್ಲತ್ತಗಿರಿ ಸುತ್ತಮುತ್ತಲಿನ ಗ್ರಾಮಸ್ಥರು ಹೇಳುತ್ತಾರೆ.

ಪ್ರತೀ ಬಾರಿ ರಜೆ ದಿನಗಳಲ್ಲಿನ ಚಿಕ್ಕಮಗಳೂರು ಜಿಲ್ಲೆಯ ಸುಂದರ ಪರಿಸರ ಸವಿಯಲು ಸ್ನೇಹಿತರೊಂದಿಗೆ ಬರುವುದು ನನ್ನ ಹವ್ಯಾಸ. ಇಲ್ಲಿನ ಗಿರಿಶ್ರೇಣಿಗಳ ಸೌಂದರ್ಯ ಪ್ರಕೃತಿ ನೀಡಿದ ಕೊಡುಗೆಯಾಗಿದೆ. ಆದರೆ ಕೆಲವರು ಇಲ್ಲಿನ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಪ್ರವಾಸಿ ತಾಣವಾಗಿರುವ ಕಲ್ಲತ್ತಗಿರಿ ಜಲಪಾತ ಇತ್ತೀಚೆಗೆ ಹಾಳಾಗುತ್ತಿದೆ. ಇಲ್ಲಿನ ರುದ್ರರಮಣೀಯ ಸೊಬಗನ್ನು ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಾದರೂ ಸಂಬಂಧಿಸಿದ ಇಲಾಖೆ ವತಿಯಿಂದ ಪ್ರವಾಸಕ್ಕೆ ಬರುವವರಿಗೆ ಮದ್ಯಪಾನ ನಿಷೇಧ ಮಾಡಬೇಕು. ನಿಯಮ ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರಿಂದ ಕಲ್ಲತ್ತಗಿರಿ ಜಲಪಾತ ಅನೈತಿಕ ಚಟುವಟಿಕೆಗಳ ಬೀಡಾಗುವುದನ್ನು ತಪ್ಪಿಸಬಹುದು.

-ಅರುಣ್‌ಕುಮಾರ್, ಪರಿಸರ ಪ್ರೇಮಿ, ಇಂಜಿನಿಯರಿಂಗ್ ವಿದ್ಯಾರ್ಥಿ, ಬೆಂಗಳೂರು.

share
ಕೆ.ಎಲ್. ಶಿವು
ಕೆ.ಎಲ್. ಶಿವು
Next Story
X