ಪಿಯುಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗೆ ಅವಕಾಶ, ಮೊಬೈಲ್‌ಗೆ ನಿಷೇಧ

ಬೆಂಗಳೂರು, ನ.26: ಪಿಯುಸಿ ವಿದ್ಯಾರ್ಥಿಗಳು ತರಗತಿ ಒಳಗೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಕೊಂಡೊಯ್ಯಬಹುದು ಎಂಬ ಸುತ್ತೋಲೆಯನ್ನು ಪರಿಷ್ಕರಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಿ ಲ್ಯಾಪ್‌ಟಾಪ್‌ಗಷ್ಟೇ ಅವಕಾಶ ನೀಡಿದೆ.
ಈ ಕುರಿತು ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಸಮಯದಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣ ನಿಷೇಧಸಲಾಗಿದೆ ಎಂದು ತಿಳಿಸಿದೆ. ಈ ನಿಯಮವನ್ನು ಸರಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.
Next Story





