Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹವಾಮಾನ ಬದಲಾವಣೆ: ಬೆಂಗಳೂರಿನಲ್ಲಿ...

ಹವಾಮಾನ ಬದಲಾವಣೆ: ಬೆಂಗಳೂರಿನಲ್ಲಿ ಅಧಿಕವಾದ ಆರೋಗ್ಯ ಸಂಬಂಧಿ ಪ್ರಕರಣಗಳು

ವಾರ್ತಾಭಾರತಿವಾರ್ತಾಭಾರತಿ26 Nov 2018 9:12 PM IST
share
ಹವಾಮಾನ ಬದಲಾವಣೆ: ಬೆಂಗಳೂರಿನಲ್ಲಿ ಅಧಿಕವಾದ ಆರೋಗ್ಯ ಸಂಬಂಧಿ ಪ್ರಕರಣಗಳು

ಬೆಂಗಳೂರು, ನ.26: ನಗರದಲ್ಲಿ ಪ್ರತಿದಿನವೂ ಹವಾಮಾನ ಬದಲಾಗುತ್ತಿದ್ದು, ತಾಪಮಾನದ ಏರಿಳಿತವಾಗುತ್ತಿದೆ. ಇದರಿಂದಾಗಿ ಜನರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದ್ದು, ಕಳೆದ ಹದಿನೈದು ದಿನಗಳಿಂದ ನಗರದಲ್ಲಿ ಜ್ವರ, ಗಂಟಲು ನೋವು ಸೇರಿದಂತೆ ಆರೋಗ್ಯ ಸಂಬಂಧಿ ರೋಗಗಳ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ.

ಮೋಡ ಕವಿದ ವಾತಾವರಣದ ಜತೆಗೆ ಚಳಿ ಗಾಳಿ ಬೀಸುತ್ತಿದೆ. ಇದರಿಂದ ನಗರದ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಇವರಲ್ಲಿ ಬಹುತೇಕರು ಶ್ವಾಸಕೋಶ ಸಂಬಂಧಿ ಸಮಸ್ಯೆ ಹೊಂದಿದವರಾಗಿದ್ದಾರೆ. ನಿತ್ಯ 10ರಲ್ಲಿ 5-6 ಮಂದಿ ಗಂಟಲು ನೋವು, ನೆಗಡಿ, ಕೆಮ್ಮು, ತಲೆನೋವು, ಮೈ ಕೈ ನೋವು, ಅಲರ್ಜಿ, ಅಸ್ತಮಾ, ಕಿವಿ ಸೋಂಕುಗಳಿಂದ ಹಿರಿಯ ಕಿರಿಯರು ಎನ್ನದೆ ವಿವಿಧ ವಯೋಮಾನದವರು ಬಳಲುತ್ತಿದ್ದಾರೆ. ಮುಂಜಾಗ್ರತೆ ವಹಿಸದ ಕಾರಣ ಶ್ವಾಸಕೋಶ ಸಮಸ್ಯೆ ಹೊಂದಿರುವವರು ಸಿಪಿಒಡಿ ತೊಂದರೆಗೆ ಒಳಗಾಗುತ್ತಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ.

ನಗರದ ವಿಕ್ಟೋರಿಯಾ, ಕೆ.ಸಿ.ಜನರಲ್, ಬೌರಿಂಗ್ ಮತ್ತು ಲೇಡಿ ಕರ್ಜನ್ ಸೇರಿದಂತೆ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರಲ್ಲಿ ಶೇ.30-40ರಷ್ಟು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು ಮಕ್ಕಳ ಆಸ್ಪತ್ರೆಯಾದ ವಾಣಿವಿಲಾಸ ಹಾಗೂ ಇಂದಿರಾಗಾಂಧಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಮಕ್ಕಳು ವಿವಿಧ ವೈರಾಣು ಜ್ವರಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿಯೂ ಶೇ. 20-25ರಷ್ಟು ಮಕ್ಕಳು ಎಚ್1ಎನ್1 ರೋಗ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ವೈದ್ಯರು ಹೇಳಿದ್ದು, ಇದಕ್ಕೆ ಹವಾಮಾನ ಬದಲಾವಣೆ ಹಾಗೂ ವಾತಾವರಣದಲ್ಲಿನ ಧೂಳು ಪ್ರಮುಖ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ.

ಚಿಕಿತ್ಸೆಗೆ ಬರುವ ಹೆಚ್ಚಿನ ರೋಗಿಗಳಲ್ಲಿ ಜ್ವರ ಮತ್ತು ಮೈ ಕೈ ನೋವು ಕುರಿತು ಮಾಹಿತಿ ನೀಡುತ್ತಾರೆ. ಆದರೆ ಉಸಿರಾಟದ ತೊಂದರೆ ಇರುವ ಬಗ್ಗೆ ತಿಳಿಸುವುದೇ ಇಲ್ಲ. ಇದರಿಂದ ರೋಗ ಶೀಘ್ರ ಪತ್ತೆಗೆ ತೊಂದರೆ ಆಗುತ್ತಿದೆ. ಆರಂಭದಲ್ಲೆ ರೋಗ ಎಲ್ಲ ಲಕ್ಷಣಗಳನ್ನು ತಿಳಿಸಿದರೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ. ಇದರಿಂದ ರೋಗ ಉಲ್ಬಣಿಸುವುದಿಲ್ಲ ಜತೆಗೆ ಎಲ್ಲರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಅಗತ್ಯ ಇರುವುದಿಲ್ಲ ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ.

ಪ್ರತಿದಿನ 80-90 ಮಂದಿಯನ್ನು ಪರೀಕ್ಷೆ ಮಾಡಿದಾಗ ಅವರಲ್ಲಿ 5 ರಿಂದ 10 ಮಂದಿ ಶ್ವಾಸಕೋಶ ಹಾಗೂ ಉಸಿರಾಟದ ತೊಂದರೆ ಹೊಂದಿರುವುದು ಕಂಡು ಬರುತ್ತಿದೆ. ಜನರು ರೋಗ ಲಕ್ಷಣದ ಬಗ್ಗೆ ಜಾಗೃತಿ ಹೊಂದಿರಬೇಕು. ಯಾರಿಗಾದರೂ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡರೆ ಕೂಡಲೇ ವೈದ್ಯರಲ್ಲಿ ಚಿಕಿತ್ಸೆ ಪಡೆಯಬೇಕು. ಸೋಂಕು ಮತ್ತೊಬ್ಬರಿಗೆ ಹರಡದಂತೆ ಎಚ್ಚರ ವಹಿಸುವುದರೊಂದಿಗೆ ಸಂಪೂರ್ಣ ಗುಣ ಹೊಂದುವವರೆಗೂ ಮನೆಯಲ್ಲಿದ್ದು ವಿಶ್ರಾಂತಿ ಪಡೆಯಬೇಕು ಎಂದು ವೈದ್ಯ ಡಾ.ಸುದರ್ಶನ ಬಲ್ಲಾಳ್ ಸಲಹೆ ನೀಡಿದ್ದಾರೆ.

ಮುನ್ನೆಚ್ಚರಿಕಾ ಕ್ರಮಗಳು:

- ಎಲ್ಲ ವಯೋಮಾನದವರೂ ಬೆಚ್ಚನೆಯ ಉಡುಪು ಧರಿಸಬೇಕು.

- ಬಿಸಿ ಮತ್ತು ತಾಜಾ ಆಹಾರವನ್ನು ಸೇವನೆ ಮಾಡಬೇಕು.

- ಕುದಿಸಿದ ನೀರನ್ನು ಕುಡಿಯಬೇಕು.

- ಕೆಮ್ಮುವಾಗ, ಸೀನುವಾಗ ಕರವಸ್ತ್ರವನ್ನು ಬಳಕೆ ಮಾಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X