ಮಂಗಳೂರು ವಕೀಲರ ಸಂಘದಿಂದ ಕಾನೂನು ದಿನಾಚರಣೆ
ಮಂಗಳೂರು, ನ.27: ಮಂಗಳೂರು ವಕೀಲರ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ಕಾನೂನು ದಿನಾಚರಣೆ ಕಾರ್ಯಕ್ರಮ ಮಂಗಳವಾರ ಜರುಗಿತು.
ಹಿರಿಯ ನ್ಯಾಯವಾದಿ ತಾರನಾಥ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾನೂನು ಪಾಲನೆ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಬೇಕು. ಯುವ ವಕೀಲರು ಕಾನೂನಿನ ಒಳ-ಹೊರವನ್ನು ಅರಿತುಕೊಂಡು ತನ್ನ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದರು.
ಕಾನೂನಿನ ಅರಿವು ಎಲ್ಲರಿಗೂ ಇರಬೇಕಾಗಿದೆ. ಆವಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಲು ಸಾಧ್ಯ. ಸಂವಿಧಾನಬದ್ಧ ಕಾನೂನುಗಳನ್ನು ಅನುಷ್ಠಾನಗೊಳಿಸಿದಾಗ ಮಾತ್ರ ಕಾನೂನಿನ ಮಹತ್ವ ತಿಳಿಯುತ್ತದೆ ಮತ್ತು ಅದರ ಗೌರವವೂ ಹೆಚ್ಚಾಗಲಿದೆ ಎಂದು ತಾರನಾಥ್ ಶೆಟ್ಟಿ ಹೇಳಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಬಳ್ಳಾಲ್, ಉಪಾಧ್ಯಕ್ಷೆ ಪುಷ್ಪಲತಾ, ಇಸ್ಮಾಯೀಲ್ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ, ನ್ಯಾವಾದಿ ದಿನಕರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Next Story