ಬಂಟ್ವಾಳ: ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಇಬ್ರಾಹಿಂ ನವಾಝ್

ಬಂಟ್ವಾಳ, ನ. 27: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯ ಇಬ್ರಾಹಿಂ ನವಾಝ್ ನೇಮಕಗೊಂಡಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಬಂಟ್ವಾಳ ತಾಪಂ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಇವರ ಶಿಫಾರಸಿನ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಈ ನೇಮಕಗೊಳಿಸಿದ್ದಾರೆ.
ಇಬ್ರಾಹಿಂ ನವಾಝ್ ಅವರಿಗೆ ಮಿಥುನ್ ರೈ ಅವರು ಇತ್ತೀಚೆಗೆ ನೇಮಕ ಆದೇಶ ಪತ್ರ ವಿತರಿಸಿದರು. ಈ ಸಂದರ್ಭ ಪಕ್ಷ ಪ್ರಮುಖರಾದ ಮಹೇಶ್ ನಾಯಕ್, ರಮ್ಲಾನ್, ಶಾಕೀರ್, ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
Next Story