Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಧಿಕಾರಿಗಳು ಉದಾಸೀನ ತೋರಿದರೆ...

ಅಧಿಕಾರಿಗಳು ಉದಾಸೀನ ತೋರಿದರೆ ಮೇಲಾಧಿಕಾರಿಗಳಿಗೆ ದೂರು ನೀಡಿ: ಶಾಸಕ

ಬಂಟ್ವಾಳ: ಗ್ರಾಮ ಮಟ್ಟದ ಅಧಿಕಾರಿ, ಅಧ್ಯಕ್ಷರ ವಿಶೇಷ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ27 Nov 2018 10:02 PM IST
share
ಅಧಿಕಾರಿಗಳು ಉದಾಸೀನ ತೋರಿದರೆ ಮೇಲಾಧಿಕಾರಿಗಳಿಗೆ ದೂರು ನೀಡಿ: ಶಾಸಕ

ಬಂಟ್ವಾಳ, ನ. 27: ಪಂಚಾಯತ್ ಅಧ್ಯಕ್ಷರು ಮತ್ತು ಅಧಿಕಾರಿಗಳ ಜೊತೆ ಸಂವಹನ ಕೊರತೆಯನ್ನು ನೀಗಿಸಲು ತಹಶೀಲ್ದಾರ್ ಸಹಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಹೊಂದಾಣಿಕೆ ಕೊರತೆಯಾದರೆ ಜನರು ಬಸವಳಿಯಬೇಕಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.

ಮಂಗಳವಾರ ಮಧ್ಯಾಹ್ನ ಬಿಸಿರೋಡಿನ ಎಸ್.ಜಿ.ಆರ್.ಎಸ್.ವೈ. ಸಭಾಂಗಣದಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಹಾಗೂ ಗ್ರಾ.ಪಂ.ಅಧ್ಯಕ್ಷರುಗಳ ವಿಶೇಷ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂಬುದು ಗಮನದಲ್ಲಿರಲಿ, ಗ್ರಾಪಂ ಅಧ್ಯಕ್ಷರಿಗೆ ಗೈಡ್ ಮಾಡಿ, ಓವರ್ ಟೇಕ್ ಮಾಡಲು ಹೋಗಬೇಡಿ ಎಂದು ಸಲಹೆ ನೀಡಿದ್ದಾರೆ. 

ಅಧಿಕಾರಿಗಳು ಗ್ರಾಪಂ ಜನಪ್ರತಿನಿಧಿಗಳೊಂದಿಗೆ ಸರಿಯಾಗಿ ಸ್ಪಂದಿಸದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಲಿಖಿತವಾಗಿ ಮೇಲಾಧಿಕಾರಿಗಳಿಗೆ ದೂರು ನೀಡಿ, ಇಲ್ಲಿ ಜನರ ಸಮಸ್ಯೆಗಳು ಪರಿಹಾರ ಆಗಬೇಕು, ಅಧಿಕಾರಿಗಳು ಉದಾಸೀನ ಮನೋಭಾವದಿಂದ ಹೊರಬರಬೇಕು ಎಂದು ಶಾಸಕರು ಸ್ಪಷ್ಟಪಡಿಸಿದರು.

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಘಟಕ ವಸತಿನಿವೇಶನ ಹಾಗೂ ಸ್ಮಶಾನಕ್ಕೆ ಜಮೀನು ಮೀಸಲಿಡಬೇಕು ಎಂದ ಶಾಸಕ, ಯಾವ ಪಂಚಾಯತ್‍ಗಳಲ್ಲಿ ಸಮಸ್ಯೆಗಳಿದೆ ಅಂತಹ ಪಂಚಾಯತ್‍ಗಳ ಜೊತೆ ಅಧಿಕಾರಿಗಳು ಸ್ಪಂದಿಸಿ, ಸರ್ವೆ ಕಾರ್ಯ ಶೀಘ್ರವಾಗಿ ನಡೆಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದರು.

ಮುಕ್ತಿಧಾಮ ರೀತಿಯಲ್ಲಿ ಸ್ಮಶಾನ:

ಸ್ಮಶಾನಗಳ ಬಗ್ಗೆ ಜನರಿಗೆ ಇರುವ ಭಯವನ್ನು ನಿವಾರಿಸಿ, ಅದನ್ನು ಸುಂದರಗೊಳಿಸಿ ಮುಕ್ತಿಧಾಮ ರೀತಿಯಲ್ಲಿ ನಿರ್ಮಿಸಿ, ಇದಕ್ಕೆ ಅನುದಾನಗಳು ಲಭ್ಯವಿದ್ದು, ಸಮಸ್ಯೆಗಳಿದ್ದರೆ ವರದಿ ನೀಡಿ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಹೇಳಿದರು. ಕೋಳಿತ್ಯಾಜ್ಯ ಎಸೆಯುವುದು, ಸಿಸಿ ಕ್ಯಾಮೆರಾವನ್ನೇ ಕದ್ದುಕೊಂಡು ಹೋಗುವುದು, ಸ್ಮಶಾನ, ಅಂಗನವಾಡಿ, ರಸ್ತೆ ಸಮಸ್ಯೆಗೆ ಇರುವ ತಕರಾರುಗಳ ಬಗ್ಗೆ ಚರ್ಚೆಗಳು ನಡೆದವು.

ಈ ಸಂದರ್ಭ ಮಾತನಾಡಿದ ಕೊಳ್ನಾಡು ಗ್ರಾಪಂ ಅಧ್ಯಕ್ಷ ಸುಭಾಶ್ಚಂದ್ರಶೆಟ್ಟಿ, ತಾಲೂಕು ಕಚೇರಿಯಲ್ಲಿ ಕಡತಗಳು ನಾಪತ್ತೆಯಾಗುತ್ತವೆ ಎಂದು ದೂರಿದರು.
ನಿವೇಶನ ಆಯ್ಕೆ ಮಾಡಿ ತಡ ಮಾಡುವ ಬದಲು ಹಕ್ಕುಪತ್ರಗಳ ತ್ವರಿತ ವಿಲೇವಾರಿ ಆಗಬೇಕು ಎಂದು ಕುಕ್ಕಿಪ್ಪಾಡಿ ಗ್ರಾಪಂ ಅಧ್ಯಕ್ಷ ದಿನೇಶ್ ಸುಂದರ ಶಾಂತಿ ಆಗ್ರಹಿಸಿದರು.
ಗ್ರಾಪಂ ಆರ್‍ಟಿಸಿ ಆಗದ ಮೂರು ಪಂಚಾಯತ್‍ಗಳ ದಾಖಲೆಗಳನ್ನು ಡಿ. 5ರೊಳಗೆ ಸಲ್ಲಿಸಬೇಕು ಎಂದು ಇಒ ಹೇಳಿದರು. ಇರಾ ಗ್ರಾಮದ ಸಮಸ್ಯೆಗಳ ಕುರಿತು ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ ವಿವರಿಸಿದರು.

ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಬಂಗೇರ, ತಹಶೀಲ್ದಾರ್ ಪುರಂದರ ಹೆಗ್ಡೆ ವೇದಿಕೆಯಲ್ಲಿದ್ದರು.
ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು. ತಾಲೂಕಿನ 58 ಗ್ರಾಪಂಗಳ ಪಿಡಿಒ, ಕಾರ್ಯದರ್ಶಿಗಳು, ಗ್ರಾಮಕರಣಿಕರು, ರೆವೆನ್ಯೂ ಇನ್‍ಸ್ಪೆಪೆಕ್ಟರ್‍ಗಳು, ಸರ್ವೇ ಇಲಾಖೆಯ ಅಧಿಕಾರಿಗಳು, ಅಧ್ಯಕ್ಷರು ಉಪಸ್ಥಿತರಿದ್ದು, ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಹಿತಿ ನೀಡಿದರಲ್ಲದೆ, ಕೆಲ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X