ಬೆಂಗಳೂರು: ಸಂಕೀರ್ಣ ಸ್ತನ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ
ಬೆಂಗಳೂರು, ನ. 27: ಗಂಭೀರ ಸ್ವರೂಪದ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ರೋಗವನ್ನು ಗುಣಪಡಿಸುವಲ್ಲಿ ನಗರದ ಬಿಜಿಎಸ್ ಗ್ಲೆನೀಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ.
ಮಂಗಳವಾರ ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯೆ ಡಾ.ಜೆ. ಮಾತಂಗಿ, 43 ವರ್ಷದ ಅವಿವಾಹಿತ ಮಹಿಳೆ ರಮ್ಯಾರ ಎರಡೂ ಸ್ತನಗಳಲ್ಲಿ ಕ್ಯಾನ್ಸರ್ ಗಡ್ಡೆ ಕಾಣಿಸಿಕೊಂಡಿದ್ದು, ಅಪರೂಪದ ಸಂಕೀರ್ಣ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಲಾಗಿದೆ ಎಂದರು.
ಇದೇ ವೇಳೆ ಮಾತನಾಡಿದ ಆಸ್ಪತ್ರೆ ಸಿಇಓ ಶೈಲಜಾ ಸುರೇಶ್, ನಮ್ಮ ಆಸ್ಪತ್ರೆಯಲ್ಲಿ ಅತ್ಯುತ್ತಮ ತಜ್ಞರನ್ನು ಹೊಂದಿದ್ದೇವೆ. ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಉತ್ತಮ ರೀತಿಯ, ಯಶಸ್ವಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Next Story





