ಉಡುಪಿ ಜಿಲ್ಲಾ ಕಟ್ಟಡ, ಇತರ ನಿರ್ಮಾಣ ಕಾರ್ಮಿಕ ಸಂಘಧ ಅಹೋರಾತ್ರಿ ಧರಣಿ ಅಂತ್ಯ
ಉಡುಪಿ, ನ. 27: ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳ ಲಾಗಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿಯನ್ನು ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ಸಂಜೆ ವೇಳೆ ಅಂತ್ಯಗೊಳಿಸಲಾಯಿತು.
ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ಗಣಿ ಇಲಾಖೆಯ ಅಧಿಕಾರಿ ಪದ್ಮಜ, ನಾಳೆಯಿಂದ ಕಾರ್ಕಳ ಹಾಗೂ ಉಡುಪಿ ತಾಲೂಕಿನ ಐದು ದಿಬ್ಬಗಳಲ್ಲಿ ಮರಳುಗಾರಿಕೆ ಆರಂಭಿಸಲಾಗುವುದು. ಆದುದರಿಂದ ಧರಣಿ ಕೈಬಿಡುವಂತೆ ಮನವಿ ಮಾಡಿದರು.
ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದ್ದು, ನಾಳೆ ಹಾಗೂ ನ.30ರಂದು ನಡೆಯುವ ಧರಣಿಯನ್ನು ಕೂಡ ರದ್ದುಗೊಳಿಸಲಾಗಿದೆ. ಸಮಸ್ಯೆ ಮುಂದುವರೆದರೆ ಡಿ.3ರಂದು ಸಭೆ ಸೇರಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದು ಸಮಿತಿ ಸಂಚಾ ಲಕ ಸುರೇಶ್ ಕಲ್ಲಾಗರ್ ತಿಳಿಸಿದ್ದಾರೆ.
Next Story