Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಡಿಶಾ: ಹಾಕಿ ವಿಶ್ವಕಪ್‌ಗೆ ವರ್ಣರಂಜಿತ...

ಒಡಿಶಾ: ಹಾಕಿ ವಿಶ್ವಕಪ್‌ಗೆ ವರ್ಣರಂಜಿತ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 Nov 2018 12:16 AM IST
share
ಒಡಿಶಾ: ಹಾಕಿ ವಿಶ್ವಕಪ್‌ಗೆ ವರ್ಣರಂಜಿತ ಚಾಲನೆ

ಭುವನೇಶ್ವರ, ನ.27: ಹದಿನಾಲ್ಕನೇ ಆವೃತ್ತಿಯ ಪುರುಷರ ಹಾಕಿ ವಿಶ್ವಕಪ್ ಟೂರ್ನಿಗೆ ಒಡಿಶಾ ರಾಜಧಾನಿ ಭುವನೇಶ್ವರದ ಕಳಿಂಗ ಸ್ಟೇಡಿಯಂನಲ್ಲಿ ಮಂಗಳವಾರ ವರ್ಣರಂಜಿತವಾಗಿ ಚಾಲನೆ ನೀಡಲಾಯಿತು.

ಎಂಟು ವರ್ಷಗಳ ಬಳಿಕ ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ 43 ವರ್ಷಗಳ ಬಳಿಕ ಪ್ರಶಸ್ತಿ ಜಯಿಸಲು ಎದುರು ನೋಡುತ್ತಿದೆ. ಭಾರತ ಬುಧವಾರ ಉದ್ಘಾಟನಾ ಪಂದ್ಯದಲ್ಲಿ ದಕ್ಷಿಣ ಆಫ್ರಿಕವನ್ನು ಎದುರಿಸಲಿದೆ.

ಇದೇ ಮೊದಲ ಬಾರಿ ಹಾಕಿ ವಿಶ್ವಕಪ್ ಟೂರ್ನಿಯನ್ನು ಅದ್ದೂರಿಯಾಗಿ ಉದ್ಘಾಟಿಸ ಲಾಗಿದ್ದು 3 ಗಂಟೆಗಳ ಕಾಲ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರೂಕ್ ಖಾನ್, ಮಾಧುರಿ ದೀಕ್ಷಿತ್ ಹಾಗೂ ಸಂಗೀತ ನಿರ್ದೇಶಕ ಎಆರ್ ರಹ್ಮಾನ್ 10,000 ಪ್ರೇಕ್ಷಕರನ್ನು ರಂಜಿಸಿದರು. ಭುವಿ ಬಿರುಕುಬಿಟ್ಟು ಭೂಮಿ ತಾಯಿ ಮೇಲೆ ಬರುವ ದೃಶ್ಯದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮಾಧುರಿ ಭೂಮಿ ತಾಯಿಯಾಗಿ ಕಾಣಿಸಿಕೊಂಡರು.

ಟೂರ್ನಿಯಲ್ಲಿ ಭಾಗವಹಿಸಲಿರುವ ಎಲ್ಲ 16 ಹಾಕಿ ತಂಡಗಳ ನಾಯಕರುಗಳನ್ನು ವೇದಿಕೆ ಮೇಲೆ ಇಂಗ್ಲೀಷ್ ವರ್ಣಮಾಲೆಯ ಪ್ರಕಾರ ಅದ್ದೂರಿ ಸ್ವಾಗತ ನೀಡಲಾಯಿತು.

ನ್ಯೂಝಿಲೆಂಡ್, ಹಾಲೆಂಡ್, ದಕ್ಷಿಣ ಆಫ್ರಿಕ, ಸ್ಪೇನ್ ಹಾಗೂ ಪಾಕಿಸ್ತಾನದ ತಂಡಗಳ ನಾಯಕರುಗಳನ್ನು ವೇದಿಕೆಗೆ ಆಹ್ವಾನಿಸಲಾಯಿತು. ಕೊನೆಯಲ್ಲಿ ಭಾರತದ ನಾಯಕ ಮನ್‌ಪ್ರೀತ್ ಸಿಂಗ್ ವೇದಿಕೆಗೆ ಏರಿದಾಗ ಜನರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಯಿತು. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ 2018ರ ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್ ಆರಂಭವಾಗಿದೆ ಎಂದು ಘೋಷಿಸಿದರು.

ನೀವೆಲ್ಲರೂ ಸಂತೋಷವಾಗಿರುವಿರಾ? ಎಂದು ಕಳಿಂಗ ಸ್ಟೇಡಿಯಂನಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ಪ್ರಶ್ನಿಸಿದ ಸಿಎಂ ಪಟ್ನಾಯಕ್, 18 ದಿನಗಳ ಕಾಲ ನಡೆಯುವ ಹಾಕಿ ಉತ್ಸವಕ್ಕೆ ನೀವೆಲ್ಲರೂ ಎದುರು ನೋಡುತ್ತಿದ್ದೀರಿ. ಇಲ್ಲಿಗೆ ಬಂದಿರುವ ಎಲ್ಲರಿಗೂ ಧನ್ಯವಾದಗಳು. ಟೂರ್ನಿಯಲ್ಲಿ ಭಾಗವಹಿಸಲಿರುವ ಎಲ್ಲ 16 ಹಾಕಿ ತಂಡಗಳಿಗೂ ಸ್ವಾಗತ’’ ಎಂದು ಹೇಳಿದರು.

ಮುಖ್ಯಮಂತ್ರಿ ಪಟ್ನಾಯಕ್ ವೇದಿಕೆಯಲ್ಲಿದ್ದ ಎಲ್ಲ 16 ಹಾಕಿ ತಂಡಗಳ ನಾಯಕರ ಕೈಕುಲುಕಿದರು. ಬಳಿಕ ಅವರೊಂದಿಗೆ ಗುಂಪು ಚಿತ್ರ ತೆಗೆಸಿಕೊಂಡರು.

ಬಾನಂಗಳದಲ್ಲಿ ಸುಡುಮದ್ದು ಸಿಡಿಸುವ ಮೂಲಕವಿಶ್ವಕಪ್ ಟೂರ್ನಿಗೆ ಚಾಲನೆ ನೀಡ ಲಾಯಿತು,. ಎಆರ್ ರಹ್ಮಾನ್, ಶಾರೂಖ್ ಖಾನ್ ಹಾಗೂ ಮಾಧುರಿ ದೀಕ್ಷಿತ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು. ಹಾಕಿ ಕುರಿತು ಕಥಾ ಹಂದರವಿದ್ದ ತಾನು ನಟಿಸಿದ್ದ ಯಶಸ್ವಿ ಹಿಂದಿ ಚಿತ್ರ ‘ಚಕ್‌ದೇ ಇಂಡಿಯಾ’ದ 70 ನಿಮಿಷದ ಸಂಭಾಷಣೆ ಹರಿಯಬಿಟ್ಟ ಶಾರೂಕ್ ಖಾನ್ ಪ್ರೇಕ್ಷಕರನ್ನು ರಂಜಿಸಿದರು. ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಟ್ವಿಟರ್‌ನ ಮೂಲಕ ಹಾಕಿ ವಿಶ್ವಕಪ್‌ನಲ್ಲಿ ಭಾಗವಹಿಸುವ ಎಲ್ಲ ತಂಡಗಳಿಗೆ ಶುಭಾಶಯ ಕೋರಿದರು. ಕ್ರೀಡಾ ಪ್ರೇಮಿಗಳಿಗೆ ಈ ಟೂರ್ನಿಯು ಮುದ ನೀಡುವ ವಿಶ್ವಾಸ ನನಗಿದೆ. ಇದು ಭಾರತದ ಅತ್ಯಂತ ಮುಖ್ಯವಾಗಿ ಒಡಿಶಾದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿದೆ’’ ಎಂದು ಟ್ವೀಟ್ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X