ಚೂರಿ ಇರಿತ: ಅಮಾಯಕ ಯುವತಿ ಸಾವು

ತಿರುನಲ್ವೇಲಿ,ನ.28: ಭಗ್ನ ಪ್ರೇಮಿಯೋರ್ವ ಪ್ರಿಯತಮೆಗೆ ಚಾಕುವಿನಿಂದ ಮನಬಂದಂತೆ ಇರಿದ ಪರಿಣಾಮ ಯುವತಿ ಮೃತಪಟ್ಟ ಘಟನೆ ತಮಿಳುನಾಡಿನ ತಿರುನಲ್ವೇಲಿ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.
ಮೃತ ಯುವತಿಯನ್ನು ಮರ್ಸಿ (22) ಎಂದು ಗುರುತಿಸಲಾಗಿದೆ. ಆರೋಪಿ ರವಿ ಬಿ.ಟೆಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ರವಿಯು ತನ್ನ ಪ್ರೀತಿಯನ್ನು ನಿರಾಕರಿಸಿದ ಪ್ರಿಯತಮೆಯನ್ನು ಚಾಕುವಿನಲ್ಲಿ ಮನಬಂದಂತೆ ಚುಚ್ಚಿದ್ದಾನೆ. ಘಟನೆಯಿಂದ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಯುವತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆಯ ನೇರ ದೃಶ್ಯಾವಳಿಗಳು ಶಾಪಿಂಗ್ ಕಾಂಪ್ಲೆಕ್ಸ್ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತಿರುನಲ್ವೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





