ತೋಟಬೆಂಗ್ರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸ್ ಇಲಾಖೆಯ ಮಿಂಚಿನ ಕಾರ್ಯಾಚರಣೆಗೆ ಎಸ್‌ಡಿಪಿಐ ಸ್ವಾಗತ
ಮಂಗಳೂರು, ನ.28: ನಗರದ ಹೊರವಲಯ ತೋಟ ಬೆಂಗ್ರೆಯಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯಾಚರಣೆಯನ್ನು ಎಸ್‌ಡಿಪಿಐ ಬೆಂಗ್ರೆ ವಾರ್ಡ್ ಸಮಿತಿ ಸ್ವಾಗತಿಸಿದೆ.
ತೋಟ ಬೆಂಗ್ರೆ, ಕಸಬ ಬೆಂಗ್ರೆ, ತಣ್ಣೀರುಬಾವಿ ಪ್ರದೇಶಗಳು ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದ್ದು, ಇಂತಹ ಆಕರ್ಷಣೆಯ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ ಕಲ್ಪಿಸಬೇಕು. ಅತ್ಯಾಚಾರದಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸಬಾರದು ಎಂದು ಎಸ್‌ಡಿಪಿಐನ ಬೆಂಗ್ರೆ ವಾರ್ಡ್ ಸಮಿತಿ ಅಧ್ಯಕ್ಷ ಶಾದಾಬ್ ಬೆಂಗ್ರೆ ಪ್ರಕಟನೆಯಲ್ಲಿ ತಿಳಿಸಿದರು.
Next Story