ಟೋಲ್‌ಗೇಟ್ ಸಮಸ್ಯೆ: ನ.29ರಂದು ಬೆಂಗಳೂರಿನಲ್ಲಿ ಉನ್ನತಮಟ್ಟದ ಸಭೆ
ಮಂಗಳೂರು, ನ.28: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ ಸಮಸ್ಯೆ ಪರಿಹರಿಸಲು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ನ.29ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಿದ್ದಾರೆ.
ಅಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಜಿಲ್ಲೆಯ ಜನಪ್ರತಿನಿಧಿ ಗಳು, ಅಧಿಕಾರಿಗಳು, ಟೋಲ್ ಸಂಸ್ಥೆಯ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
Next Story