Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿಯಲ್ಲಿ ಕನಕ ಜಯಂತಿ...

ಮಂಗಳೂರು ವಿವಿಯಲ್ಲಿ ಕನಕ ಜಯಂತಿ ಪ್ರಯುಕ್ತ ಕನಕ ತತ್ವಚಿಂತನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Nov 2018 8:08 PM IST
share
ಮಂಗಳೂರು ವಿವಿಯಲ್ಲಿ ಕನಕ ಜಯಂತಿ ಪ್ರಯುಕ್ತ ಕನಕ ತತ್ವಚಿಂತನ ಕಾರ್ಯಕ್ರಮ

ಕೊಣಾಜೆ, ನ. 28: ಭಕ್ತಿ ಪರಂಪರೆ ಒಂದು ಒಳಗೊಳ್ಳುವಿಕೆಯ ಪರಂಪರೆಯಾಗಿದೆ. ಶ್ರೇಣೀಕೃತ ಸಮಾಜದ ವ್ಯವಸ್ಥೆಯನ್ನು ಖಂಡಿಸಿ ಅದನ್ನು ದೂರಗೊಳಿಸುವ ಪ್ರಯತ್ನಗಳು ಭಕ್ತಿಪರಂಪರೆಯ ಕಾಲಘಟ್ಟದಲ್ಲಿ ನಡೆದಿತ್ತು ಎಂದು ಖ್ಯಾತ ಚಿಂತಕ ಪ್ರೊ. ಬಸವರಾಜ ಕಲ್ಗುಡಿ ಅವರು ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿಶ್ವವಿದ್ಯಾಲಯದ ಕನಕದಾಸ ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಕನಕ ಜಯಂತಿ ಪ್ರಯುಕ್ತ ಬುಧವಾರ ಮಂಗಳೂರು ವಿವಿಯ ಹಳೆಸೆನೆಟ್ ಸಭಾಂಗಣದಲ್ಲಿ ಕನಕ ತತ್ವಚಿಂತನ ಮತ್ತು ಕನಕಗಂಗೋತ್ರಿ ಕಾರ್ಯಕ್ರಮದಲ್ಲಿ `ಭಕ್ತಿಪರಂಪರೆಯ ಲೋಕಯಾನ ಮತ್ತು ಕನಕದಾಸರು: ಸಮಕಾಲೀನ ಸಂವಾದ' ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಮಾತನಾಡಿದರು.

ಭಕ್ತಿ ಪರಂಪರೆಯ ಒಳಗೊಳ್ಳುವಿಕೆಯ ಪ್ರಕ್ರಿಯೆಯಲ್ಲಿ ಒಬ್ಬ ವ್ಯಕ್ತಿಯನ್ನು ಯಾವುದೇ ಜಾತಿ ಧರ್ಮದಲ್ಲಿ ನೋಡದೆ ಆತನನ್ನು ಅಂತಸತ್ವದ ಮೂಲಕ ವ್ಯಕ್ತಿಯನ್ನಾಗಿ ನೋಡುವ ದೃಷ್ಟಿಕೋನವನ್ನು ಇಟ್ಟುಕೊಂಡಿತ್ತು. ಪರಂಪರಾಗತ ಶೇಣೀಕೃತ ಸಮಾಜ ವ್ಯವಸ್ಥೆಯನ್ನು ವಿರೋದಿಸಿದ ಮೊದಲ ಪರಂಪರೆ ಅದು ಭಕ್ತಿಪರಂಪರೆಯಾಗಿದೆ. ಭಕ್ತಿ ಪರಂಪರೆಯಲ್ಲಿ ಕನಕದಾಸರಿಗೆ ಬಹು ದೊಡ್ಡ ಹೆಸರು ಇದೆ. ಕನಕ ಭಕ್ತ ಮಾತ್ರವಲ್ಲ ಒಂದು ದೊಡ್ಡ ಕವಿ ಹೃದಯವುಳ್ಳ ದಾರ್ಶನಿಕನೂ ಹೌದು. ಸಾಮಾಜಿಕ ವ್ಯವಸ್ಥೆಯ ಬಗ್ಗೆ ಚಿಂತನೆ, ಧೋರಣೆಗಳನನ್ನು ಕನಕನ ಕೀರ್ತನೆಗಳಲ್ಲಿಯೇ ನಾವು ಕಾಣಬಹುದು. ಕೇವಲ ಸೀಮಿತ ಸಮುದಾಯಕ್ಕೆ ಮಾತ್ರ ಸೀಮಿತವಾಗಿದ್ದ ಕೃಷ್ಣನನ್ನು ನಾಲ್ಕುಗೋಡೆಗಳ ನಡುವಿನಿಂದ ಹೊರೆಗೆ ತಂದು ಇಡೀ ಲೋಕಕ್ಕೆ ಪರಿಚಯಿಸುದರೊಂದಿಗೆ ಸಮಾನತೆಯ ಸಮಾಜ ನಿರ್ಮಾಣದ ಕಾರ್ಯದಲ್ಲಿ ಕನಕನ ಪಾತ್ರವು ಮಹತ್ವಪೂರ್ಣವಾದುದು ಎಂದು ಹೇಳಿದರು. 

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿರು ಕನಕದಾಸ ಸಂಶೋಧನಾ ಕೇಂದ್ರವು ಹತ್ತು ಹಲವಾರು ಕಾರ್ಯಕ್ರಮಗಳೊಂದಿಗೆ ಕನಕನ ಚಿಂತನೆಗಳನ್ನು ಜನರಿಗೆ ತಲುಪಿಸುವ ಉತ್ತಮ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಪಿ.ಎಲ್.ಧರ್ಮ ಅವರು, ಕನಕನಲ್ಲಿ ನಾವು ಸಾಮಾಜಿಕ ಸಮಾನತೆ, ಪ್ರಜಾಪ್ರಭುತ್ವದ ನೆಲೆ ಹಾಗೂ ಬಹುತ್ವದ ಚಿಂತನೆಯನ್ನು ಕಾಣಲು ಸಾಧ್ಯವಿದೆ. ಆದರೆ ಕನಕನ ತತ್ವ ಚಿಂತನೆಗಳು ಇಂದು ಕಾರ್ಯರೂಪಕ್ಕೆ ಬರುತ್ತಿಲ್ಲ. ನಮ್ಮೊಳಗಿರುವ ಅಹಂನ್ನು ನಾವು ದೂರಗೊಳಿದಿದ್ದರೆ ಕನಕನ ಚಿಂತನೆಗಳನ್ನು ಕೂಡಾ ನಾವು ಮೈಗೂಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ.ಈಶ್ವರ ಪಿ ಅವರು ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕನಕ ಚಿಂತನ ಕೃತಿಗಳ ಎರಡನೇ ಆವೃತ್ತಿಯನ್ನು ಬಿಡುಗೊಡೆಸಲಾಯಿತು. ಹಾಗೈ 2017-18ನೇ ಸಾಲಿನ ಕನಕ ಪುರಸ್ಕಾರವನ್ನು ಸಾಧಕರಿಗೆ ನೀಡಿ ಗೌರವಿಸಲಾಯಿತು. 

ಕನಕದಾಸ ಸಂಶೋಧನಾ ಕೇಂದ್ರದ ಸಂಯೋಜಕರಾದ ಪ್ರೊ.ಬಿ.ಶಿವರಾಮ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಶೋಧನಾ ಸಹಾಯಕ ರಮೇಶ್ ಆರ್ ವಂದಿಸಿದರು. ವಿದ್ಯಾರ್ಥಿನಿ ಅರ್ಪಿತ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ  ಕನಕಗಂಗೋತ್ರಿ ಕೀರ್ತನ ಗಾಯನ ಕಾರ್ಯಕ್ರಮವು ನಡೆಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X