ನ.30ರಂದು ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಉಡುಪಿ, ನ.28: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ನೀಡಬೇಕಾಗಿರುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನ.30ರಂದು ಬೆಳಗ್ಗೆ 11:30ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ನಿಮಿತ್ತ ಉಡುಪಿ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ನ.1ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿತರಣೆ ನಡೆದಿರಲಿಲ್ಲ. ಈ ಬಾರಿಯ ಪ್ರಶಸ್ತಿ ವಿಜೇತರ ಹೆಸರುಗಳನ್ನು ನಾಳೆ ಪ್ರಕಟಿಸುವ ನಿರೀಕ್ಷೆ ಇದೆ.
Next Story