ಅಪರಿಚಿತ ವ್ಯಕ್ತಿ ಮೃತ್ಯು: ವಾರಸುದಾರರ ಗಮನಕ್ಕೆ
ಉಡುಪಿ, ನ.28: ಉಡುಪಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನ.10 ರಂದು ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ಸುಮಾರು 60 ವರ್ಷ ಪ್ರಾಯದ 5 ಅಡಿ ಎತ್ತರದ ಅಪರಿಚಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಆತ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ.
ಮೃತ ಅಪರಿಚಿತ ಗಂಡಸಿನ ವಾರಸುದಾರರು ಯಾರಾದರು ಇದ್ದಲ್ಲಿ, ಕೂಡಲೇ ಉಡುಪಿ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820- 2520444ನ್ನು ಸಂಪರ್ಕಿಸುವಂತೆ ಉಡುಪಿ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.
Next Story