ಡಿ.2ರಂದು ಕಟ್ಟಡ ಕಾರ್ಮಿಕರ ಸಮ್ಮೇಳನ
ಕುಂದಾಪುರ, ನ.28: ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ತಾಲೂಕು ಮಹಾಸಭೆಯು ಡಿ.2ರಂದು ಬೆಳಿಗ್ಗೆ 10 ಗಂಟೆಗೆ ಕುಂದಾಪುರ ಹಂಚು ಕಾರ್ಮಿಕ ಭವನದಲ್ಲಿ ಜರಗಲಿದೆ.
ಸಿಐಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಹಾಸಭೆಯನ್ನು ಉಧ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಯು.ದಾಸಭಂಡಾರಿ ವಹಿಸಲಿರುವರು.
90 ಗ್ರಾಮ ಘಟಕಗಳಿಂದ 400 ಪ್ರತಿ ನಿಧಿಗಳು ಭಾಗವಹಿಸಲಿರುವರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
Next Story





