ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಮಲ್ಪೆ, ನ.28: ಚಿನ್ನದ ಕೆಲಸ ಮಾಡಿಕೊಂಡಿದ್ದ ಕೆಳಾರ್ಕಳಬೆಟ್ಟು ಶ್ರೀನಗರ ನಿವಾಸಿ ಅಲಿ ಅಖ್ತರ್ ಶೇಖ ಎಂಬವರ ಮಗ ಮಿಲನ್ ಹುಸೈನ್ (25) ಎಂಬ ವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.27ರಂದು ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ: ದೃಷ್ಟಿ ದೋಷದ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.19ರಂದು ಸಂಜೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸೇನಾಪುರ ಬೆಳ್ಳಾಡಿಯ ವೆಂಕಟ ಪೂಜಾರಿ(75) ಎಂಬವರು ನ.27ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story