Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯಡ್ಕದ ‘ಮದ್ದಲೆ ಮಾಂತ್ರಿಕ’ನಿಗೆ...

ಹಿರಿಯಡ್ಕದ ‘ಮದ್ದಲೆ ಮಾಂತ್ರಿಕ’ನಿಗೆ ರಾಜ್ಯೋತ್ಸವದ ಗರಿ

ವಾರ್ತಾಭಾರತಿವಾರ್ತಾಭಾರತಿ28 Nov 2018 9:54 PM IST
share
ಹಿರಿಯಡ್ಕದ ‘ಮದ್ದಲೆ ಮಾಂತ್ರಿಕ’ನಿಗೆ ರಾಜ್ಯೋತ್ಸವದ ಗರಿ

ಉಡುಪಿ, ನ.28: ಕರಾವಳಿಯ ಮೂರು ಜಿಲ್ಲೆಗಳ ಯಕ್ಷಗಾನ ಲೋಕದಲ್ಲಿ ‘ಮದ್ದಲೆ ಮಾಂತ್ರಿಕ’ರೆಂದೇ ಹೆಸರಾದ ಹಿರಿಯಡಕ ಗೋಪಾಲರಾಯರು ತಮ್ಮ 99ರ ಹರೆಯದಲ್ಲೂ ನವತಾರುಣ್ಯದ ಎಲ್ಲಾ ಛಾಪನ್ನು ತೋರಿಸಿ ಈಗಲೂ ಕಲಾಪ್ರೇಮಿಗಳು ಮತ್ತು ತನ್ನ ಅಭಿಮಾನಿಗಳನ್ನು ಮಂತ್ರಮುಗ್ಧಗೊಳಿಸುತಿದ್ದಾರೆ. ಇದೀಗ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿಯೂ ಮುಡಿಗೇರಿದೆ.

ಮುಂದಿನ ಡಿ.15ಕ್ಕೆ 99 ವರ್ಷಗಳನ್ನು ಪೂರ್ಣಗೊಳಿಸಿ 100ನೇ ವರ್ಷಕ್ಕೆ ಕಾಲಿರಿಸುವ ಯಕ್ಷಗಾನದ ಈ ಹಿರಿಯಜ್ಜನ ಅಂದಿನ ಅದ್ಭುತ ಮದ್ದಲೆ ಮಾಂತ್ರಿಕ ಶಕ್ತಿ ಕ್ಷೀಣಿಸದೇ ಇರುವುದು ವಿಶೇಷವಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಅವರ 99ನೇ ಹುಟ್ಟುಹಬ್ಬದ ದಿನದಂದು ಅವರು ತಮ್ಮ ಸುಲಲಿತ ಮದ್ದಲೆ ವಾದನದ ಮೂಲಕ ಅಂದು ಹಿರಿಯಡ್ಕ ಓಂತಿಬೆಟ್ಟಿನ ಅವರ ‘ಸೀತಾರಾಮ ನಿಲಯ’ದಲ್ಲಿ ಸೇರಿದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದರು. ಕೈಗೆ ಮದ್ದಲೆ ಸಿಕ್ಕಿದರೆ, ತಾವೇ ಮಟ್ಟುಗಳನ್ನು ಹಾಕಿ, ಅದಕ್ಕೆ ಸರಿಯಾಗಿ ತನ್ನ ಬೆರಳುಗಳಿಂದ ಮದ್ದಲೆಯನ್ನೂ ನುಡಿಸುವ ಗೋಪಾಲರಾಯರ ಲವಲವಿಕೆ ಅರ್ಧ ತಮಾನಗಶಷ್ಟು ಹಿಂದೆ ಇದ್ದಂತಿದೆ.

1919ರ ಡಿ.15ರಂದು ಹಿರಿಯಡ್ಕದಲ್ಲಿ ಜನಿಸಿದ ಗೋಪಾಲರಾಯರು ಕಲಿತಿದ್ದು 6ನೇ ತರಗತಿಯವರೆಗೆ ಮಾತ್ರ. ಆದರೆ ಯಕ್ಷಗಾನ ಚೌಕಿ ಹಾಗೂ ರಂಗಸ್ಥಳ ದಲ್ಲಿ ಅವರು ಕಲಿತಿದ್ದು ಬದುಕಿನ ಕಲೆಯನ್ನು. 16ನೇ ವಯಸ್ಸಿನಲ್ಲಿ ತಂದೆ ಶೇಷಗಿರಿ ರಾವ್ ಇವರಿಂದ ಮದ್ದಲೆಯನ್ನು ಅಭ್ಯಾಸ ಮಾಡಿದ ಗೋಪಾಲರಾಯರು, ನೃತ್ಯವನ್ನು ಗುರು ನಾಗಪ್ಪ ಕಾಮತರಿಂದ ಕಲಿತರು. 1934ರಲ್ಲಿ ಹಿರಿಯಡ್ಕ ಮೇಳದಲ್ಲಿ ಪಾತ್ರಧಾರಿಯಾಗಿ ಪ್ರವೇಶ ಪಡೆದ ಅವರು 1936ರಲ್ಲಿ ಸಹ ಮದ್ದಲೆ ಕಲಾವಿದರಾದರು. ಮುಂದಿನ ವರ್ಷವೇ ಪೆರ್ಡೂರು ಮೇಳದಲ್ಲಿ ಪ್ರಧಾನ ಮದ್ದಲೆಕಾರರಾಗಿ ಸೇರಿದ ಗೋಪಾಲರಾಯರು ನಂತರ ಹಿಂದಿರುಗಿ ತಿರುಗಿ ನೋಡಲಿಲ್ಲ.

1939ರಿಂದ 67ರವರೆಗೆ ಅವರು ಅಂದು ಬಡಗುತಿಟ್ಟಿನ ಪ್ರಧಾನ ಮೇಳ ವಾದ ಮಂದಾರ್ತಿ ಮೇಳದ ಪ್ರಧಾನ ಮದ್ದಲೆಕಾರರಾಗಿ ದುಡಿದರು.ಈ ನಡುವೆ 1961ರಲ್ಲಿ ಕೋಟ ಶಿವರಾಮ ಕಾರಂತರ ಸಂಪರ್ಕಕ್ಕೆ ಬಂದ ಗೋಪಾಲರಾಯರು, ಅವರ ಯಕ್ಷಗಾನ ನೃತ್ಯಗಳಿಗೆ ಹಾಗೂ ಯಕ್ಷಗಾನ ಗೋಷ್ಠಿಗಳಲ್ಲಿ ಮದ್ದಲೆಕಾರರಾಗಿ ಕಾರ್ಯನಿರ್ವಹಿಸಿದರು. ಕಾರಂತರ ಒಡನಾಟ ಸಿಕ್ಕ ಬಳಿಕ ಗೋಪಾಲರಾಯರ ಯಕ್ಷಗಾನ ಬದುಕಿಗೆ ಹೊಸ ದಾರಿ ದೊರೆತಂತಾಯಿತು.

ಮುಂದೆ 1968ರಲ್ಲಿ ಕಾರಂತರು ಬ್ರಹ್ಮಾವರದಲ್ಲಿ ಪ್ರಾರಂಭಿಸಿದ ಯಕ್ಷಗಾನ ಕೇಂದ್ರಕ್ಕೆ ಅಧ್ಯಾಪಕರಾಗಿ ಸೇರಿದರು. ಮರುವರ್ಷ ಪೀಟರ್ ಕ್ಲಾಸ್‌ರ ಜೊತೆ ಕ್ಯಾಲಿಫೋರ್ನಿಯ ವಿವಿಯಲ್ಲಿ ಕೆಲಸ ಮಾಡಿದರು. 1970ರಲ್ಲಿ ಕಾರಂತರ ಸಲಹೆಯಂತೆ ಉಡುಪಿಗೆ ಮರಳಿದ ಗೋಪಾಲರಾಯರು, ಇಲ್ಲಿ ಯಕ್ಷಗಾನದಲ್ಲಿ ಡಾಕ್ಟರೇಟ್ ಮಾಡಲು ಬಂದ ಮಾರ್ತಾ ಆಸ್ಟನ್‌ಗೆ ಯಕ್ಷಗಾನ ನೃತ್ಯ ಕಲಿಸಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದರು.

1971ರಿಂದ ಐದು ವರ್ಷಗಳ ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ಅಧ್ಯಾಪಕರಾಗಿ ದುಡಿದು, 1976ರಲ್ಲಿ ಕೇಂದ್ರದಿಂದ ನಿವೃತ್ತರಾದರು. ಬಳಿಕ ಯಕ್ಷಗಾನ ಪ್ರಚಾರಕ್ಕಾಗಿ ಮಾರ್ತಾ ಜೊತೆ ಯಕ್ಷಗಾನ ತಂಡದೊಂದಿಗೆ ವಿದೇಶಕ್ಕೆ ಕೊಂಡೊಯ್ದು ಪ್ರಾತ್ಯಕ್ಷಿಕೆ ನೀಡಿದರು. ಈ ಮದ್ಯೆ 1973ರಲ್ಲಿ ಬಿ.ವಿ.ಕಾರಂತರ ಜೊತೆ ಹೊಸದಿಲ್ಲಿಯ ಎನ್‌ಎಸ್‌ಡಿಯಲ್ಲೂ ಶಿಬಿರದಲ್ಲಿ ಪಾಲ್ಗೊಂಡರು.

ಆ ಬಳಿಕವೂ ಹಲವು ಬಾರಿ ಯಕ್ಷಗಾನ ತಂಡಗಳೊಂದಿಗೆ ವಿದೇಶಿ ಪ್ರಯಾಣ ನಡೆಸಿದ ಗೋಪಾಲರಾಯರಿಗೆ 1972ರಲ್ಲಿ ರಾಜ್ಯ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 1997ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, 1998ರಲ್ಲಿ ಜಾನಪದಶ್ರೀ ಪ್ರಶಸ್ತಿ, 2012ರಲ್ಲಿ ಜಾನಪದ ಸಿರಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕಲಾ ಉತ್ಸವಗಳಲ್ಲಿ ಯಕ್ಷಗಾನದ ಕುರಿತಂತೆ ಪ್ರಾತ್ಯಕ್ಷಿಕೆ, ಶಿಬಿರಗಳನ್ನು ನಡೆಸಿಕೊಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X