Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುಡಿಯುವ ನೀರಿನ ಯೋಜನೆಗಳಿಗೆ ಡಿ.31ರೊಳಗೆ...

ಕುಡಿಯುವ ನೀರಿನ ಯೋಜನೆಗಳಿಗೆ ಡಿ.31ರೊಳಗೆ ಕಾರ್ಯಾದೇಶ ನೀಡಲು ಸಚಿವ ಕೃಷ್ಣಭೈರೇಗೌಡ ಸೂಚನೆ

ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ28 Nov 2018 10:38 PM IST
share
ಕುಡಿಯುವ ನೀರಿನ ಯೋಜನೆಗಳಿಗೆ ಡಿ.31ರೊಳಗೆ ಕಾರ್ಯಾದೇಶ ನೀಡಲು ಸಚಿವ ಕೃಷ್ಣಭೈರೇಗೌಡ ಸೂಚನೆ

ಬೆಂಗಳೂರು, ನ. 28: ಗ್ರಾಮೀಣ ಪ್ರದೇಶದ ಎಲ್ಲ ಕುಡಿಯುವ ನೀರಿನ ಯೋಜನೆಗಳಿಗೆ ಡಿ.31ರೊಳಗೆ ಕಾರ್ಯಾದೇಶ ನೀಡಿ, ಎಲ್ಲ ಕಾಮಗಾರಿಗಳನ್ನು ಮಾರ್ಚ್ 31ರೊಳಗೆ ಪೂರ್ಣಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ನಿರ್ದೇಶನ ನೀಡಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿ.ಪಂ. ಸಿಇಓಗಳ ಸಭೆಯಲ್ಲಿ ಇಲಾಖೆ ಪ್ರಗತಿ ಪರಿಶೀಲನೆ ಬಳಿಕ ಮಾತನಾಡಿದ ಅವರು, 1700 ಕೋಟಿ ರೂ.ವೆಚ್ಚದಲ್ಲಿ ಕೈಗೊಂಡಿರುವ ಪ್ರಗತಿಯಲ್ಲಿರುವ 27 ಸಾವಿರ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಬರ ಪರಿಹಾರ: ಈಗಾಗಲೇ 100 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದು, ಶಾಸಕರ ಅಧ್ಯಕ್ಷತೆಯಲ್ಲಿನ ಕಾರ್ಯಪಡೆಗೆ 50ಲಕ್ಷ ರೂ.ಬಿಡುಗಡೆ ಮಾಡಿದ್ದು, ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ ಈ ಹಣವನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದರು.

10 ಕೋಟಿ ಮಾನವ ದಿನ ಸೃಜನೆ: ಖಾತ್ರಿ ಯೋಜನೆಯಡಿ 8.5 ಕೋಟಿ ಮಾನವ ದಿನ ಸೃಜನೆ ಗುರಿ ಹೊಂದಿದ್ದು, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಅದನ್ನು 10 ಕೋಟಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಆ ಮೂಲಕ ಶಾಲಾ ಕಾಂಪೌಂಡ್, ಶೌಚಾಲಯ, ದನದ ಕೊಟ್ಟಿಗೆ, ಕೃಷಿ ಹೊಂಡ ಸೇರಿದಂತೆ ಆಸ್ತಿ ಸೃಷ್ಟಿಸಲಾಗುವುದು ಎಂದು ಅವರು ತಿಳಿಸಿದರು.

ಕಸ ನಿರ್ವಹಣೆ: ಗ್ರಾಮೀಣ ಪ್ರದೇಶದಲ್ಲಿನ ಒಣ ಕಸ ಸಂಗ್ರಹಿಸಲು ಈಗಾಗಲೇ ಉಡುಪಿ ಜಿಲ್ಲೆಯ 12 ಗ್ರಾ.ಪಂ.ಗಳನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದು, ಮಾರ್ಚ್ 31ರೊಳಗೆ ಇದನ್ನು 500ಗ್ರಾ.ಪಂ.ಗಳಿಗೆ ವಿಸ್ತರಿಸಲಾಗುವುದು. ಹಳ್ಳಿಗಳಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್ ಕಸ ಸುಸ್ಥಿರ ವಿಲೇಗೆ ಕ್ರಮ ವಹಿಸಲಾಗುವುದು ಎಂದರು.

ಇಲಾಖೆಯಲ್ಲಿ 5ಲಕ್ಷ ರೂ.ವರೆಗಿನ ಕಾಮಗಾರಿಗಳನ್ನು ತುಂಡು ಗುತ್ತಿಗೆ ನೀಡಲು ಅವಕಾಶ ಕಲ್ಪಿಸಿದ್ದು, 5ಲಕ್ಷ ರೂ.ಗಳಿಗೂ ಮೇಲ್ಪಟ್ಟ ಕಾಮಗಾರಿಗಳನ್ನು ಟೆಂಡರ್ ಕರೆಯಬೇಕೆಂದು ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಶಿಫಾರಸ್ಸನ್ನು ಆಧರಿಸಿ ಹಣಕಾಸು ಇಲಾಖೆ ತುಂಡು ಗುತ್ತಿಗೆ 1ಲಕ್ಷ ರೂ.ಗೆ ಮಿತಿಗೊಳಿಸಿ ಆದೇಶ ಹೊರಡಿಸಿತ್ತು ಎಂದು ಸ್ಪಷ್ಟಣೆ ನೀಡಿದರು.

ಸುದ್ಧಿಗೋಷ್ಠಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಆಯುಕ್ತ ವಿಶಾಲ್ ಸೇರಿ ಹಿರಿಯ ಅಧಿಕಾರಿಗಳು ಹಾಜರಿದ್ದರು.

‘ಉದ್ಯೋಗ ಖಾತರಿ ಯೋಜನೆಯಡಿ ಹಿಂದಿನ ವರ್ಷದ ಬರ ಪರಿಸ್ಥಿತಿ ವೇಳೆ ನಡೆದಿದ್ದ ಕಾಮಗಾರಿಗೆ ಕೇಂದ್ರದ ಪರವಾಗಿ ರಾಜ್ಯ ಸರಕಾರ 1500 ಕೋಟಿ ರೂ. ನೀಡಿತ್ತು. ಆಪೈಕಿ 550 ಕೋಟಿ ರೂ.ನೀಡಿದ್ದು, ಉಳಿದ 950 ಕೋಟಿ ರೂ. ಕೇಂದ್ರದಿಂದ ಬಾಕಿ ಬರಬೇಕಿದೆ. ಜತೆಗೆ ಈ ವರ್ಷದ್ದು 250 ಕೋಟಿ ರೂ. ಬಾಕಿ ಇದೆ. ಹೀಗಾಗಿ ಕೂಡಲೇ ಬಾಕಿ ಹಣ ಬಿಡುಗಡೆಗೆ ಕೋರಿ ಪ್ರಧಾನಿ ಮೋದಿಯವರಿಗೆ ಸಿಎಂ ಕುಮಾರಸ್ವಾಮಿ ಶೀಘ್ರವೇ ಪತ್ರ ಬರೆಯಲಿದ್ದಾರೆ’

-ಕೃಷ್ಣಭೈರೇಗೌಡ ಗ್ರಾಮೀಣಾಭಿವೃದ್ಧಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X