Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಮಾಜಿಕ-ಆರ್ಥಿಕ ಅಸಮಾನತೆ ಹೋಗಲಾಡಿಸಲು...

ಸಾಮಾಜಿಕ-ಆರ್ಥಿಕ ಅಸಮಾನತೆ ಹೋಗಲಾಡಿಸಲು ಶಿಕ್ಷಣವೇ ಮಂತ್ರ: ಪ್ರಣವ್ ಮುಖರ್ಜಿ

ವಾರ್ತಾಭಾರತಿವಾರ್ತಾಭಾರತಿ28 Nov 2018 10:49 PM IST
share
ಸಾಮಾಜಿಕ-ಆರ್ಥಿಕ ಅಸಮಾನತೆ ಹೋಗಲಾಡಿಸಲು ಶಿಕ್ಷಣವೇ ಮಂತ್ರ: ಪ್ರಣವ್ ಮುಖರ್ಜಿ

ಬೆಂಗಳೂರು, ನ.28: ಸಾಮಾಜಿಕ ಮತ್ತು ವೃತ್ತಿಪರ ಸ್ಥಾನಮಾನದಲ್ಲಿ ಕೆಳಮಟ್ಟದಲ್ಲಿದ್ದವರಿಗೆ ಮೇಲೇರಲು ಶಿಕ್ಷಣ ಏಣಿಯಿದ್ದಂತೆ. ನಮ್ಮ ಆರ್ಥಿಕ ಸ್ಥಿತಿಯನ್ನು ಬದಲಾಯಿಸಲು ಮತ್ತು ಸಮಾಜದಲ್ಲಿ ಅಸಮಾನತೆಗೆ ಕಾರಣವಾದ ಅಂತರವನ್ನು ಹೋಗಲಾಡಿಸಲು ಶಿಕ್ಷಣವೊಂದೇ ಮಂತ್ರ ಎಂದು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟರು.

ಬುಧವಾರ ನಗರದ ವರ್ತೂರಿನಲ್ಲಿ ಇರುವ ಗ್ರೀನ್‌ವುಡ್ ಹೈ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಆಯೋಜಿಸಲಾಗಿದ್ದ ಶಿಕ್ಷಣದ ಮೌಲ್ಯಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ಶೈಕ್ಷಣಿಕ ಸಂಸ್ಥೆಗಳು, ದೇಶದ ಭವಿಷ್ಯದ ದೃಷ್ಟಿಯಿಂದ ಅತೀ ಮುಖ್ಯವಾಗಿ ಮೌಲ್ಯಗಳನ್ನು ತಿಳಿಸುವ ಮೂಲಕ ಯುವಜನತೆಯನ್ನು ಬೆಳೆಸುವ ಹೊಣೆಗಾರಿಕೆಯನ್ನು ಹೊಂದಿವೆ, ಇವುಗಳಲ್ಲಿ ನಮ್ಮ ವಿಭಿನ್ನ ಸಂಸ್ಕೃತಿಗಳನ್ನು ಒಂದೆಡೆ ತರುವ ಸಮಾನತೆ, ಸಹಾನುಭೂತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳೂ ಸೇರಿವೆ ಎಂದು ಅವರು ಹೇಳಿದರು.

ಭಾರತದ ಉನ್ನತ ಆರ್ಥಿಕಾಭಿವೃದ್ಧಿಯ ತಂತ್ರಗಾರಿಕೆ ಬಡತನವನ್ನು ಮೀರಿ ಬೆಳೆಯುವುದು ಮತ್ತು ಎಲ್ಲರ ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳುವುದನ್ನು ಗುರಿಯನ್ನಾಗಿಸಿಕೊಂಡಿದೆ. ನಾವು ಆರ್ಥಿಕಾಭಿವೃದ್ಧಿಯನ್ನು ನಮ್ಮ ಜನರಿಗೆ ವಿಶೇಷವಾಗಿ ಸಾಮಾಜಿಕ-ಆರ್ಥಿಕ ಪಿರಾಮಿಡ್‌ನ ಬುಡದಲ್ಲಿರುವವರಿಗೆ ಪ್ರಸ್ತುತವನ್ನಾಗಿಸ ಬೇಕಾಗಿದೆ ಎಂದು ಪ್ರಣವ್ ಮುಖರ್ಜಿ ಕರೆ ನೀಡಿದರು. ಪ್ರಜಾಪ್ರಭುತ್ವ ರಾಜಕೀಯದ ಉನ್ನತ ಗುರಿಯಾಗಿ ನ್ಯಾಯದ ಹಂಚಿಕೆಯನ್ನು ಕೇವಲ ಉತ್ತಮ ಶೈಕ್ಷಣಿಕ ವ್ಯವಸ್ಥೆಯಿಂದ ಮಾತ್ರ ಸಾಧಿಸಬಹುದು. ರಾಜಕೀಯಕ್ಕೆ ಸೇರುವ ಮೊದಲು ಶಿಕ್ಷಕನಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಬಗ್ಗೆ ತಿಳಿಸಿದ ಅವರು, ದೃಢ ವ್ಯಕ್ತಿತ್ವವನ್ನು ಬೆಳೆಸಲು ಸಾಧ್ಯವಾಗದಿದ್ದರೆ, ಅಂತಹ ಸಾಹಿತ್ಯಿಕ ಶಿಕ್ಷಣಕ್ಕೆ ಯಾವುದೇ ಬೆಲೆಯಿಲ್ಲ ಎಂಬ ಮಹಾತ್ಮ ಗಾಂಧೀಜಿಯವರ ಮಾತನ್ನು ಉಲ್ಲೇಖಿಸಿದರು. ಜೀವನದಲ್ಲಿ ನೀವು ಬೆಳೆದಂತೆ, ಶಿಕ್ಷಣಕ್ಕೆ ಮತ್ತು ಕಲಿಕೆಗೆ ಕೊನೆಯಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಿ. ನಿಮ್ಮ ವ್ಯಾಪ್ತಿಯನ್ನು ವಿಶಾಲವಾಗಿಸಿಕೊಳ್ಳಿ ಮತ್ತು ಹೊಸ ಎತ್ತರವನ್ನು ತಲುಪಿ ನೀವು ಪ್ರಾಮಾಣಿಕವಾಗಿ ಮತ್ತು ಸಮರ್ಪಣಾ ಭಾವದಿಂದ ಕೆಲಸ ಮಾಡಿದರೆ ಎಲ್ಲ ಸವಾಲುಗಳನ್ನು ಮೆಟ್ಟಿ ನಿಲ್ಲಬಹುದು ಮತ್ತು ಒಳ ಸಮತೋಲನವನ್ನು ಕಾಪಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಗ್ರೀನ್‌ವುಡ್ ಹೈ ಟ್ರಸ್ಟ್ ಮಂಡಳಿಯ ಅಧ್ಯಕ್ಷ ಬಿಜಾಯ್ ಕುಮಾರ್ ಅಗರ್ವಾಲ್ ಮಾತನಾಡಿ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ತಮ್ಮ ಮೌಲ್ಯಯುತ ಸಮಯವನ್ನು ನಮ್ಮ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವುದರ ಮೂಲಕ ಕಳೆದಿರುವುದು ನಮ್ಮ ಸೌಭಾಗ್ಯ ಎಂದರು.

ಈ ಸಂದರ್ಭದಲ್ಲಿ ಗ್ರೀನ್‌ವುಡ್ ಹೈ ಶಾಲೆಯ ಪ್ರಾಂಶುಪಾಲ ಅಲೋಷಿಯಸ್ ಡಿ’ಮೆಲ್ಲೊ ಸೇಂದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X