Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಬೃಹತ್ ರ‍್ಯಾಲಿಯನ್ನು...

ರೈತರ ಬೃಹತ್ ರ‍್ಯಾಲಿಯನ್ನು ಜಂತರ್‌ಮಂತರ್‌ನಲ್ಲಿ ತಡೆದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ30 Nov 2018 1:56 PM IST
share
ರೈತರ ಬೃಹತ್ ರ‍್ಯಾಲಿಯನ್ನು ಜಂತರ್‌ಮಂತರ್‌ನಲ್ಲಿ ತಡೆದ ಪೊಲೀಸರು

ಹೊಸದಿಲ್ಲಿ, ನ.30:  ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಗರಿಷ್ಠ ಬೆಲೆ ನೀಡಬೇಕು ಹಾಗೂ ಸ್ವಾಮಿನಾಥನ್ ವರದಿ ಜಾರಿ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ದೇಶದ ವಿವಿಧ ಭಾಗಗಳಿಂದ ಹರಿದುಬಂದ ಸಾವಿರಾರು ರೈತರು ಶುಕ್ರವಾರ ಬೆಳಗ್ಗೆ ದಿಲ್ಲಿಯ ಐತಿಹಾಸಿಕ ರಾಮಲೀಲಾ ಮೈದಾನದಿಂದ ಸಂಸತ್ ಭವನದತ್ತ ಬೃಹತ್ ಕಾಲ್ನಡಿಗೆ ರ‍್ಯಾಲಿ ಆರಂಭಿಸಿದ್ದು, ದಿಲ್ಲಿ ಪೊಲೀಸರು ಜಂತರ್‌ಮಂತರ್‌ನಲ್ಲಿ ರ‍್ಯಾಲಿಗೆ ತಡೆಯೊಡ್ಡಿದ್ದಾರೆ.

ಆಂಧ್ರಪ್ರದೇಶ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮಬಂಗಾಳ, ಕರ್ನಾಟಕ ಹಾಗೂ ಉತ್ತರಪ್ರದೇಶ ರಾಜ್ಯಗಳ ರೈತರು ರೈಲು, ಬಸ್ ಹಾಗೂ ಇತರ ಸಾರಿಗೆ ವ್ಯವಸ್ಥೆ ಮೂಲಕ ಗುರುವಾರ ದಿಲ್ಲಿಗೆ ಆಗಮಿಸಿ ರಾಮಲೀಲಾ ಮೈದಾನದಲ್ಲಿ ರಾತ್ರಿ ಕಳೆದಿದ್ದರು.

ತೆಲಂಗಾಣದಿಂದ ಬಂದ ರೈತ ಮಹಿಳೆಯರು  ಆತ್ಮಹತ್ಯೆ ಮಾಡಿಕೊಂಡಿರುವ ತಮ್ಮ ಗಂಡಂದಿರ ಫೋಟೊಗಳನ್ನು ಕುತ್ತಿಗೆಗೆ ನೇತಾಡಿಸಿಕೊಂಡು ದಿಲ್ಲಿಯ ಬೀದಿಗಳಲ್ಲಿ ನಡೆದಾಡಿದರು.

ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ಬಿಜ್ವಾಸನ್‌ನಿಂದ ರಾಮಲೀಲಾ ಮೈದಾನದ ತನಕ 26 ಕಿ.ಮೀ.ದೂರ ಪ್ರತಿಭಟನಾ ರ‍್ಯಾಲಿ ನಡೆಸಿ ಗುರುವಾರ ದಿಲ್ಲಿಗೆ ಬಂದಿದ್ದರು. ಒಡಿಶಾ, ಹರ್ಯಾಣ ಹಾಗೂ ರಾಜಸ್ಥಾನದ ರೈತರುಗಳು ಯೋಗೇಂದ್ರ ಯಾದವ್ ಅವರ ರ‍್ಯಾಲಿಗೆ ಕೈಜೋಡಿಸಿದರು.

 ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಕಳೆದ ರಾತ್ರಿ ಕೆಲವು ಸಮಯ ಧರಣಿ ನಿರತ ರೈತರೊಂದಿಗೆ ಕಾಲ ಕಳೆದಿದ್ದರು. ‘‘ನಾವೀಗ ಬರಗಾಲಕ್ಕಿಂತ ಭೀಕರ ಪರಿಸ್ಥಿತಿಗೆ ಸಾಕ್ಷಿಯಾಗುತ್ತಿದ್ದೇವೆ. ಕಳೆದ ಎರಡು ವರ್ಷಗಳಿಂದ ರೈತರ ಆತ್ಮಹತ್ಯೆ ಅಂಕಿ-ಅಂಶವನ್ನೇ ಪ್ರಕಟಿಸಲಾಗುತ್ತಿಲ್ಲ. 2015ರಲ್ಲಿ ಇದನ್ನು ನಿಲ್ಲಿಸಲಾಗಿದೆ’’ ಎಂದು ಸಾಯಿನಾಥ್ ಹೇಳಿದ್ದಾರೆ.

  ''ಪ್ರತಿಭಟನಾನಿರತ ಮುಖಂಡರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಆ ಬಳಿಕ ಷರತ್ತಿನೊಂದಿಗೆ ಜಂತರ್‌ಮಂತರ್‌ಗೆ ತೆರಳಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದೆ. ಭದ್ರತೆ, ಟ್ರಾಫಿಕ್ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಸರಿಯಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ರೈತರು ನಾವು ವಿಧಿಸಿರುವ ಷರತ್ತುಗಳನ್ನು ಪಾಲಿಸುವ ವಿಶ್ವಾಸವಿದೆ'' ಎಂದು ಪೊಲೀಸ್ ಉಪಾಯುಕ್ತ ಮಾಧುರ್ ವರ್ಮಾ ಹೇಳಿದ್ದಾರೆ.

ಸಂಜೆ ವೇಳೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಭಟನಾ ನಿರತ ರೈತರೊಂದಿಗೆ ಸೇರಿಕೊಳ್ಳಲಿದ್ದಾರೆ. ಜೆಡಿಯುನ ಹಿರಿಯ ನಾಯಕ ಕೆಸಿ ತ್ಯಾಗಿ, ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ.ರಾಜಾ ಹಾಗೂ ಸಮಾಜವಾದಿ ಪಕ್ಷದ ಇತರ ಮುಖಂಡರು ಕೂಡ ಪ್ರತಿಭಟನೆಯಲ್ಲಿ ಕೈಜೋಡಿಸುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X